Advertisement

ಬಸ್‌ ಕಾರ್ಯಾಚರಣೆ ಪುನಾರಂಭ

08:34 AM Jul 22, 2020 | Suhan S |

ಹುಬ್ಬಳ್ಳಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜಾರಿಯಲ್ಲಿದ್ದ ಲಾಕ್‌ಡೌನ್‌ ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಇಲ್ಲಿನ ವಾಯವ್ಯ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ಗ್ರಾಮೀಣ ಸಾರಿಗೆ ವಿಭಾಗದಿಂದ ಬುಧವಾರದಿಂದ ಬಸ್‌ ಕಾರ್ಯಾಚರಣೆ ಪುನರಾರಂಭವಾಗಲಿವೆ.

Advertisement

ವಿಭಾಗದ ವ್ಯಾಪ್ತಿಯ ಎಲ್ಲ ಬಸ್‌ ಘಟಕಗಳು ಹಾಗೂ ಬಸ್‌ ನಿಲ್ದಾಣಗಳಿಂದ ಬಸ್‌ಗಳ ಸಂಚಾರವನ್ನು ಪುನರಾರಂಭಿಸಲಾಗುತ್ತದೆ. ಹುಬ್ಬಳ್ಳಿಯ ಹಳೆಯ ಬಸ್‌ ನಿಲ್ದಾಣ, ಹೊಸೂರು ಪ್ರಾದೇಶಿಕ ಬಸ್‌ ನಿಲ್ದಾಣ, ಗೋಕುಲ ರಸ್ತೆಯ ಹೊಸ ಬಸ್‌ ನಿಲ್ದಾಣ,ಕಲಘಟಗಿ,ಕುಂದಗೋಳ, ನವಲಗುಂದ, ಅಣ್ಣಿಗೇರಿ ಹಾಗೂ ಮತ್ತಿತರ ಬಸ್‌ ನಿಲ್ದಾಣಗಳಿಂದ ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ವಿವಿಧ ಮಾರ್ಗಗಳಲ್ಲಿ ಬಸ್‌ ಕಾರ್ಯಾಚರಣೆ ಮಾಡಲಾಗುತ್ತದೆ. ವಿಭಾಗದ ವ್ಯಾಪ್ತಿಯ ಎಲ್ಲಾ ಬಸ್‌ ಘಟಕಗಳು, ಬಸ್‌ಗಳು ಮತ್ತು ಬಸ್‌ ನಿಲ್ದಾಣಗಳನ್ನು ಈಗಾಗಲೇ ಸಂಪೂರ್ಣವಾಗಿ ಸೋಡಿಯಂ ಹೈಪೋಕ್ಲೋರೈಡ್‌ ದ್ರಾವಣ ಸಿಂಪಡಿಸಿ ಸ್ಯಾನಿಟೈಜೇಷನ್‌ ಮಾಡಲಾಗಿರುತ್ತದೆ. ಸರಕಾರದ ಮಾರ್ಗಸೂಚಿಗಳ ಪ್ರಕಾರ ಎಲ್ಲಾ ಸುರಕ್ಷಿತ ಕ್ರಮಗಳನ್ನು ಅನುಸರಿಸಿ ಬಸ್‌ಗಳನ್ನು ರಸ್ತೆಗಿಳಿಸಲಾಗುತ್ತದೆ. ಮಾಸ್ಕ್ ಧರಿಸಿದ ಪ್ರಯಾಣಿಕರಿಗೆ ಮಾತ್ರವೇ ಬಸ್‌ ನಿಲ್ದಾಣಕ್ಕೆ ಪ್ರವೇಶಿಸಲು ಅನುಮತಿಸಲಾಗುತ್ತದೆ. ನಿಲ್ದಾಣದ ಪ್ರವೇಶದ್ವಾರದಲ್ಲಿ ಎಲ್ಲಾ ಪ್ರಯಾಣಿಕರಿಗೆ ಸ್ಯಾನಿಟೈಸರ್‌ ನೀಡಲಾಗುತ್ತದೆ ಹಾಗೂ ಥರ್ಮಲ್‌ ಸ್ಕ್ರೀನಿಂಗ್‌ ಮಾಡಲಾಗುತ್ತದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಪ್ರತಿ ಬಸ್ಸಿನಲ್ಲಿ 30 ಪ್ರಯಾಣಿಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತದೆ. ಆದ್ದರಿಂದ ಪ್ರಯಾಣಿಕರು ಯಾವುದೇ ಆತಂಕವಿಲ್ಲದೆ ಸಂಸ್ಥೆಯ ಬಸ್‌ಗಳಲ್ಲಿ ಸುರಕ್ಷಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್‌. ರಾಮನಗೌಡರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next