ಲಕ್ನೋ: 45 ಮಂದಿ ಪ್ರಯಾಣಿಕರು ಸಂಚರಿಸುತ್ತಿದ್ದ ಬಸ್ ಒಂದು ಮಗುಚಿ ಬಿದ್ದ ಪರಿಣಾಮ 16 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರ ಮುಂಜಾನೆ ಲಕ್ನೋ- ಆಗ್ರಾ ಎಕ್ಸ್ ಪ್ರೆಸ್ ವೇ ನಲ್ಲಿ ನಡೆದಿದೆ.
Advertisement
ಲಕ್ನೋ- ಆಗ್ರಾ ಎಕ್ಸ್ ಪ್ರೆಸ್ ವೇ ನ ಇಟಾವಾ ಜಿಲ್ಲೆಯಲ್ಲಿ ಇಂದು ಮುಂಜಾನೆ ಈ ಘಟನೆ ನಡೆದಿದೆ. ಬಸ್ ದಿಲ್ಲಿಯಿಂದ ಬಿಹಾರದ ಮಧುಬನಿಗೆ ಸಂಚಾರ ನಡೆಸುತ್ತಿತ್ತು.
ಘಟನೆಯಲ್ಲಿ 16 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸೈಫೈ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. 29 ಮಂದಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಿಡುಗಡೆ ಮಾಡಲಾಗಿದೆ ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ.