Advertisement

ಆಗ್ರಾ -ಲಕ್ನೋ ಹೆದ್ದಾರಿಯಲ್ಲಿ ಭೀಕರ ಅಪಘಾತ : 7 ಬಲಿ

08:49 AM Apr 22, 2019 | Team Udayavani |

ಲಕ್ನೋ: ಉತ್ತರಪ್ರದೇಶದ ಮಾಯಿನ್‌ ಪುರಿ ಎಂಬಲ್ಲಿ ಆಗ್ರಾ – ಲಕ್ನೋ ಎಕ್ಸ್‌ ಪ್ರಸ್‌ ಹೆದ್ದಾರಿಯಲ್ಲಿ ಆದಿತ್ಯವಾರ ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

Advertisement

ಇಲ್ಲಿನ ಕರ್ಹಾಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿನ ಹೆದ್ದಾರಿಯಲ್ಲಿ ದೆಹಲಿಯಿಂದ ಬನಾರಸ್‌ ಗೆ ಸಾಗುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಎದುರು ಸಾಗುತ್ತಿದ್ದ ಟ್ರಕ್ಕಿಗೆ ಅಪ್ಪಳಿಸಿದ ಪರಿಣಾಮ ಬಸ್ಸಿನಲ್ಲಿದ್ದ ಏಳು ಜನ ಸಾವಿಗೀಡಾಗಿದ್ದಾರೆ ಮತ್ತು 34 ಪ್ರಯಾಣಿಕರು ಗಾಯಗೊಂಡಿದ್ದಾರೆ.

ವೇಗವಾಗಿ ಸಾಗುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ಕಳೆದುಕೊಂಡು ಟ್ರಕ್ಕಿಗೆ ಅಪ್ಪಳಿಸಿದ ಕಾರಣ ಬಸ್ಸಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಬಸ್ಸಿನಲ್ಲಿ ಸಿಲುಕಿಕೊಂಡಿದ್ದ ಪ್ರಯಾಣಿಕರನ್ನು ಮತ್ತು ಮೃತದೇಹಗಳನ್ನು ಹೊರತೆಗೆಯಲು ಹರಸಾಹಸಪಡಬೇಕಾಯಿತು.

ಗಾಯಾಳುಗಳಲ್ಲಿ ಹಲವರ ಸ್ಥಿತಿ ಗಂಭೀರವಾಗಿರುವುದರಿಂದ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

Advertisement

Udayavani is now on Telegram. Click here to join our channel and stay updated with the latest news.

Next