ಚಿತ್ರದುರ್ಗ: ನಿಂತಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ ಹಾಗೂ ಲಾರಿ ಚಾಲಕ ಮೃತ ಪಟ್ಟು 30ಕ್ಕೂ ಅಧಿಕ ಜನ ಗಾಯಗೊಂಡ ಘಟನೆ ಜಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಿ.ಜಿ.ಕೆರೆ ಬಳಿ ಸೋಮವಾರ ನಸುಕಿನ ಜಾವ ನಡೆದಿದೆ.
Advertisement
ಮೃತಪಟ್ಟವರಲ್ಲಿ ಬಸ್ ಚಾಲಕ ನಾಡಗೌಡ ಎಂದು ತಿಳಿದು ಬಂದಿದ್ದು. ಲಾರಿ ಚಾಲಕನ ಗುರುತು ಪತ್ತೆಯಾಗಿಲ್ಲ ಘಟನೆಯಲ್ಲಿ 30ಕ್ಕೂ ಅಧಿಕ ಜನರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೊಳಕಾಲ್ಮೂರು ಪೊಲೀಸರು ಸ್ಥಳಕ್ಕಾಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.