Advertisement
ಕಳೆದ ಜೂನ್, ಜುಲೈ, ಆಗಸ್ಟ್ ಮಾಹೆಯಲ್ಲಿ ಸುರಿದ ವ್ಯಾಪಕ ಮಳೆಯಿಂದಾಗಿ ಶಿರಾಡಿ ಘಾಟ್‌ನಲ್ಲಿ ಅಲ್ಲಲ್ಲಿ ಭೂ ಕುಸಿತ ಉಂಟಾಗಿ ರಸ್ತೆಯನ್ನು ಬಂದ್ ಮಾಡಲಾಗಿತ್ತು. ಕಳೆದ ಸೆಪ್ಟೆಂಬರ್ ಮೊದಲ ವಾರದಿಂದ ಲಘು ವಾಹನಗಳಿಗೆ ಶಿರಾಡಿಯಲ್ಲಿ ಸಂಚರಿಸಲು ಅವಕಾಶ ನೀಡಲಾಗಿದ್ದು ಬಸ್‌ಗಳ ಸಂಚಾರಕ್ಕೆ ಅವಕಾಶ ನೀಡುವಂತೆ ಸಾರ್ವಜನಿಕ ವಲಯದಿಂದ ಒತ್ತಡ ಬಂದಿದ್ದರಿಂದ ಅ.3 ರಿಂದ ಶಿರಾಡಿ ಘಾಟ್‌ನಲ್ಲಿ ಪ್ರಯಾಣಿಕರ ವಾಹನಗಳ ಸಂಚಾರಕ್ಕೆ ಅವಕಾಶ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಮಾಡಿದ್ದರು.
ವಿದ್ಯಾರ್ಥಿಗಳು ಮತ್ತು ಪೋಷಕರಿಗೂ ಸಹ ಬಹಳ ಅನುಕೂಲವಾಗುತ್ತಿದ್ದು ಜೊತೆಗೆ ಬೆಂಗಳೂರು ಮಂಗಳೂರು ನಡುವೆ ವ್ಯಾಪಾರ, ಉದ್ಯೋಗ ಮತ್ತಿತರ ಉದ್ದೇಶಗಳಿಂದ ತಿರುಗಾಡುವವರಿಗೂ ಸಹ ಅನುಕೂಲವಾಗುತ್ತಿದೆ. ಇದೇ ವೇಳೆ ಭಾರಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡುವ ನಿಟ್ಟಿನಲ್ಲಿ ಚಿಂತನೆ ಮಾಡಲಾಗುತ್ತಿದ್ದು ಇನ್ನು ಕೆಲವು ದಿನಗಳಲ್ಲಿ ಶಿರಾಡಿಯಲ್ಲಿ ಬಾರಿ ವಾಹನಗಳ ಸಂಚಾರ ಸಹ ಆರಂಭಗೊಳ್ಳುವ ಸಾಧ್ಯತೆಯಿದೆ.