Advertisement

ಮಳೆಗೆ ಬಸ್‌ನಿಲ್ದಾಣ ಜಲಾವೃತ

11:55 AM Oct 09, 2017 | Team Udayavani |

ಬೆಂಗಳೂರು: ನಗರದಲ್ಲಿ ಶನಿವಾರ ತಡರಾತ್ರಿ ಸುರಿದ ಮಳೆಯಿಂದಾಗಿ ಹಲವಾರು ಭಾಗಗಳಲ್ಲಿ ನೀರು ತುಂಬಿಕೊಂಡು ಅವಾಂತರ ಸೃಷ್ಟಿಯಾಗಿದೆ. ನಗರದ ಕೆಂಪೇಗೌಡ ಬಸ್‌ ನಿಲ್ದಾಣದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಎರಡು ಅಡಿಗೂ ಹೆಚ್ಚು ನೀರು ನಿಂತಿದ್ದು, ಬಸ್‌ಗಳ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಬಸ್‌ ನಿಲ್ದಾಣ ಸಂಪೂರ್ಣ ಜಲಾವೃತಗೊಂಡ ಹಿನ್ನೆಲೆಯಲ್ಲಿ ನೀರು ಹೊರ ಹಾಕಲು ಸಿಬ್ಬಂದಿ ಹರಸಾಹಸ ಪಡಬೇಕಾಯಿತು. 

Advertisement

ತಡರಾತ್ರಿ 2 ಗಂಟೆಗೆ ಆರಂಭವಾದ ಮಳೆ ಒಂದು ಗಂಟೆಗೂ ಹೆಚ್ಚು ಕಾಲ ಸುರಿದಿದ್ದರಿಂದ ಹಲವಾರು ರಸ್ತೆಗಳಲ್ಲಿ ನೀರು ನಿಂತು ವಾಹನ ಸವಾರರು ತೊಂದರೆ ಅನುಭವಿಸುವಂತಾಯಿತು. ವೈಯಾಲಿ ಕಾವಲ್‌ ಬಳಿ ಮರವೊಂದು ಬಿದ್ದ ಪರಿಣಾಮ ತೀವ್ರ ಸಂಚಾರ ದಟ್ಟಣೆ ಉಂಟಾಗಿತ್ತು. ಕೂಡಲೇ ಪಾಲಿಕೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮರ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Advertisement

Udayavani is now on Telegram. Click here to join our channel and stay updated with the latest news.

Next