Advertisement

ಮುದ್ದೇಬಿಹಾಳದಲ್ಲಿ ಸೇವೆಗೆ ಹಾಜರಾದ ಸಿಬ್ಬಂದಿ: ಸಾರಿಗೆ ಬಸ್ ಸಂಚಾರ ಆರಂಭ

11:58 AM Apr 08, 2021 | Team Udayavani |

ವಿಜಯಪುರ: ಆರನೇ ವೇತನಕ್ಕೆ ಆಗ್ರಹಿಸಿ ಸಾರಿಗೆ ಸಂಸ್ಥೆಯ ನೌಕರರು ಆರಂಭಿಸಿದ ಮುಷ್ಕರ ಎರಡನೇ ದಿನಕ್ಕೆ ಕಾಲಿರಿಸಿದೆ. ಇದರ ಮಧ್ಯೆ ಜಿಲ್ಲೆಯ ವಿವಿಧೆಡೆ ಸಿಬ್ಬಂದಿ ಕರ್ತವ್ಯಕ್ಕೆ ಆಗಮಿಸುತ್ತಿದ್ದು, ನಿಧಾನಕ್ಕೆ ಬಸ್ ಸಂಚಾರ ಆರಂಭಗೊಂಡಿದೆ.

Advertisement

ಬುಧವಾರ ಮುಷ್ಕರಕ್ಕೆ ಸಂಪೂರ್ಣ ಬೆಂಬಲ ನೀಡಿದ್ದ ಸಾರಿಗೆ ಸಂಸ್ಥೆಯ ಮುದ್ದೇಬಿಹಾಳ ಘಟಕದ ಸಿಬ್ಬಂದಿ ಗುರುವಾರ ಬೆಳಿಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಮುದ್ದೇಬಿಹಾಳ ಬಸ್ ನಿಲ್ದಾಣದಿಂದ ನಾಲತವಾಡ ಪಟ್ಟಣಕ್ಕೆ ಪೊಲೀಸ್ ಭದ್ರತೆಯಲ್ಲಿ ಕರ್ತವ್ಯಕ್ಕೆ ತೆರಳಿದ ಸಿಬ್ಬಂದಿಯನ್ನು ಅಧಿಕಾರಿ ಅಭಿನಂದಿಸಿ, ಕರ್ತವ್ಯಕ್ಕೆ ಬೀಳ್ಕೊಟ್ಟಿದ್ದಾರೆ.

ಈ ಮಧ್ಯೆ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ವಿಜಯಪುರ ವಿಭಾಗದ ವಿವಿಧ ಘಟಕಗಳಲ್ಲೂ ಸಿಬ್ಬಂದಿ ಕರ್ತವ್ಯಕ್ಕೆ ಬರುತ್ತಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಗುರುವಾರ ವಿಧಾನಕ್ಕೆ ಸಾರಿಗೆ ಸಂಸ್ಥೆ ಬಸ್ ಸಂಚಾರ ಆರಂಭಗೊಳ್ಳುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next