Advertisement

ಮಂಗಳೂರು: ವಿಮಾನ‌ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಸಾರಿಗೆಗೆ ಸಂಸದ ನಳಿನ್‌ ಕುಮಾರ್‌ ಚಾಲನೆ

12:39 PM Nov 01, 2022 | Team Udayavani |

ಮಂಗಳೂರು: ಇಲ್ಲಿನ ಅಂತರಾಷ್ಟ್ರೀಯ ವಿಮಾನ‌ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಸಾರಿಗೆಗೆ ನವೆಂಬರ್ 1 ಕನ್ನಡ ರಾಜ್ಯೋತ್ಸವದಂದು ನಗರದ ಬಿಜೈನಲ್ಲಿರುವ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಕರಾವಳಿ ಕನ್ನಡ ತೇರು ಹೆಸರಿನ ಮೂರು ಬಸ್ ಗಳಿಗೆ ಸಂಸದರಾದ‌ ನಳಿನ್ ಕುಮಾರ್ ಕಟೀಲ್ ಅವರ ಉಪಸ್ಥಿತಿಯಲ್ಲಿ ಚಾಲನೆ ನೀಡಲಾಯಿತು.

Advertisement

ಈ ಬಸ್‌ ಗಳು ಮಂಗಳೂರು-ಏರ್ಪೋರ್ಟ್, ಏರ್ಪೋರ್ಟ್- ಮಣಿಪಾಲ ಮಾರ್ಗವಾಗಿ ಕಾರ್ಯಚರಿಸಲಿವೆ.

ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್, ಡಾ.ವೈ.ಭರತ್ ಶೆಟ್ಟಿ, ಉಮಾನಾಥ್ ಕೊಟ್ಯಾನ್,  ವಿಧಾನ ಪರಿಷತ್ ಶಾಸಕ ಪ್ರತಾಪ ಸಿಂಹ ನಾಯಕ್, ಮೀನುಗಾರಿಕಾ‌ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ. ತೀರ್ಥರಾಮ್, ಕೆ.ಎಸ್.ಆರ್.ಟಿ.ಸಿ ವಿಭಾಗಿಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ ಸೇರಿದಂತೆ ಇತರೆ ಜನ‌ಪ್ರತಿನಿಧಿಗಳು, ಸಾರಿಗೆ‌ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next