Advertisement

ಬೆಳಗಾವಿ: ಪ್ರಯಾಣಿಕರಿಗೆ ಸಿಹಿ ಹಂಚಿ ಬಸ್ ಪ್ರಯಾಣ ಆರಂಭ

10:15 AM May 19, 2020 | keerthan |

ಬೆಳಗಾವಿ: ಮಂಗಳವಾರದಿಂದ ಲಾಕ್ ಡೌನ್ ಸಡಿಲಿಕೆ ಮಾಡಿದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಸ್ ಸೇವೆ ಆರಂಭಗೊಂಡಿದ್ದು, ಬೆಳಗಾವಿಯಿಂದ ಬೆಂಗಳೂರಿಗೆ ಮೊದಲ ಬಸ್ ಸಂಚಾರ ಆರಂಭಿಸಿತು.

Advertisement

ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಮಹಾದೇವ ಮುಂಜಿ ಬಸ್ ಸಂಚಾರಕ್ಕೆ ಹಸಿರುನಿಶಾನೆ ತೋರಿದರು. ಈ ಬಸ್ ನಲ್ಲಿ ಪ್ರಯಾಣಿಸಿದವರಿಗೆ ಸಿಹಿ ಹಂಚಲಾಯಿತು.

ಬೆಳಗಾವಿ ನಗರದಲ್ಲಿ ಸಿಟಿ ಬಸ್ ಗಳ ಸಂಚಾರ ಕೂಡ ಆರಂಭವಾಗಿದೆ. ಕಂಟೇನ್ಮೆಂಟ್ ಝೋನ್ ಹೊರತುಪಡಿಸಿ ಉಳಿದ ಬಡಾವಣೆಗಳಲ್ಲಿ ಈ ಬಸ್ ಗಳು ಸಂಚರಿಸಲಿವೆ‌.  ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆಧ್ಯತೆ ನೀಡಲಾಗಿದ್ದು ಕಡ್ಡಾಯವಾಗಿ ಮಾಸ್ಕ್ ಧರಿಸಿದವರಿಗೆ ಮಾತ್ರ ಪ್ರಯಾಣಕ್ಕೆ ಅನುಮತಿ ನೀಡಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next