Advertisement

Road Mishap: ಬೈಕ್‌ ಸವಾರನ ಕೈ ಮೇಲೆ ಹರಿದ ಬಸ್ಸಿನ ಚಕ್ರ; ಗಂಭೀರ ಗಾಯ

01:10 AM Oct 02, 2024 | Team Udayavani |

ಉಪ್ಪಿನಂಗಡಿ: ಕೆಎಸ್ಸಾರ್ಟಿಸಿ ಬಸ್ಸೊಂದು ಓವರ್‌ಟೇಕ್‌ ಮಾಡುವ ಭರದಲ್ಲಿ ಬೈಕೊಂದಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸ್ಕಿಡ್‌ ಆಗಿ ಬಿದ್ದಿದ್ದು, ಬೈಕ್‌ ಸವಾರನ ಮೇಲೆ ಬಸ್ಸಿನ ಚಕ್ರ ಹರಿದಿದ್ದರಿಂದ ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ 34 ನೆಕ್ಕಿಲಾಡಿಯ ಅಂಬೆಲದ ಬಳಿ ನಡೆದಿದೆ.

Advertisement

ವಿನೋದರ (57) ಅವರು ಗಾಯಗೊಂಡ ಬೈಕ್‌ ಸವಾರ. ಉಪ್ಪಿನಂಗಡಿಯಿಂದ ಪುತ್ತೂರಿಗೆ ಹೋಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ ಓವರ್‌ಟೇಕ್‌ ಮಾಡುವ ಭರದಲ್ಲಿ ಬೈಕ್‌ಗೆ ತಾಗಿದ್ದು, ಆಗ ಬೈಕ್‌ ಸ್ಕಿಡ್‌ ಆಗಿ ಬಿದ್ದಿದೆ.

ಬೈಕಿನೊಂದಿಗೆ ರಸ್ತೆಗೆ ಬಿದ್ದ ಬೈಕ್‌ ಸವಾರನ ಕೈಯ ಮೇಲೆ ಬಸ್‌ನ ಹಿಂಬದಿ ಚಕ್ರ ಹರಿದಿದ್ದು, ಬೈಕ್‌ ಸವಾರನಿಗೆ ಗಂಭೀರ ಗಾಯವಾಗಿದೆ. ಗಾಯಾಳುವಿಗೆ ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next