Advertisement
ಅವರು ಮಂಗಳವಾರ ಸಂಜೆ ಕುಂದಾಪುರ ಜೂನಿಯರ್ ಕಾಲೇಜಿನ ಕಲಾಮಂದಿರದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಪ್ರದಾನ ಕಾರ್ಯಕ್ರಮದಲ್ಲಿ ಕವಲು ದಾರಿಯಲ್ಲಿ ಪತ್ರಕರ್ತ ವಿಷಯದಲ್ಲಿ ದಿಕ್ಸೂಚಿ ಭಾಷಣ ಮಾಡಿದರು.
Related Articles
Advertisement
ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಶಿಧರ ಹೆಮ್ಮಾಡಿ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕುಂದಾಪುರ ಎಎಸ್‌ಪಿ ಹರಿರಾಮ್ ಶಂಕರ್, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಸಂತೋಷ್ ಸರಳೆಬೆಟ್ಟು, ಜಿಲ್ಲಾ ಉಪಾಧ್ಯಕ್ಷ ರಾಜೇಶ್ ಕೆ.ಸಿ., ಬೈಂದೂರು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜನಾರ್ದನ್ ಎಸ್. ಮರವಂತೆ, ಬ್ರಹ್ಮಾವರ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ, ತಾಲೂಕು ಕಾರ್ಯದರ್ಶಿ ನಾಗರಾಜ ರಾಯಪ್ಪನಮಠ, ಕೋಶಾಧಿಕಾರಿ ಸತೀಶ್ ಆಚಾರ್ ಉಪಸ್ಥಿತರಿದ್ದರು.
ಹಿರಿಯ ಪತ್ರಕರ್ತ ರಾಮಕೃಷ್ಣ ಹೇಳೆì ಪ್ರಸ್ತಾವಿಸಿ, ಪತ್ರಕರ್ತ ರಾಘವೇಂದ್ರ ಪೈ ಸ್ವಾಗತಿಸಿ, ಪತ್ರಕರ್ತ ಶ್ರೀಕಾಂತ ಹೆಮ್ಮಾಡಿ ವಂದಿಸಿ, ಪತ್ರಕರ್ತ ಜಯಶೇಖರ್ ಮಡಪ್ಪಾಡಿ ನಿರೂಪಿಸಿದರು.
ಸಮನ್ವಯ ಇರಲಿಮಾಧ್ಯಮ ಕ್ಷೇತ್ರ ಮತ್ತು ಪೊಲೀಸ್ ಇಲಾಖೆ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಮಾಧ್ಯಮ ಮತ್ತು ಪೊಲೀಸ್ ಇಲಾಖೆ ಪರಸ್ಪರ ಸಮನ್ವಯದಿಂದ ತಮ್ಮ ಕರ್ತವ್ಯವನ್ನು ನಿರ್ವಹಿಸುವುದರಿಂದ ಸಾಮಾಜಿಕ ಸಾಮರಸ್ಯವನ್ನು ಕಾಪಾಡಲು ಸಹಾಯವಾಗುತ್ತದೆ.
-ಹರಿರಾಮ್ ಶಂಕರ್,
ಎಎಸ್ಪಿ ಕುಂದಾಪುರ