Advertisement

ಉದ್ಯಮಿ ಆರ್.ಎನ್.ಶೆಟ್ಟಿ ನಿಧನಕ್ಕೆ ಹೆಚ್.ಡಿ ದೇವೇಗೌಡ, ಡಿಸಿಎಂ ಕಾರಜೋಳ ಸಂತಾಪ

10:03 AM Dec 17, 2020 | Mithun PG |

ಬೆಂಗಳೂರು:  ನಾಡಿನ ಖ್ಯಾತ ಉದ್ಯಮಿ ಆರ್.ಎನ್. ಶೆಟ್ಟಿ ಅವರ ನಿಧನಕ್ಕೆ ಉಪಮುಖ್ಯಮಂತ್ರಿ  ಗೋವಿಂದ ಎಂ ಕಾರಜೋಳ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ  ತೀವ್ರ ಸಂತಾಪ ಸೂಚಿಸಿದ್ದಾರೆ.

Advertisement

ಕೃಷಿಕ ಮನೆತನದಲ್ಲಿ ಜನಿಸಿ, ಉದ್ಯಮದತ್ತ ಸಾಗಿ ಆರ್.ಎನ್. ಶೆಟ್ಟಿ ಅವರು, ನಿರ್ಮಾಣ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹೋಟೆಲ್ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದರು. ಶಿಕ್ಷಣ ಕ್ಷೇತ್ರಕ್ಕೂ ಅಪರ  ಕೊಡುಗೆ ನೀಡಿದ್ದಾರೆ.

ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು ಕರುಣಿಸಲಿ ಹಾಗೂ ಅವರ ಕುಟುಂಬದವರಿಗೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ  ಡಿಸಿಎಂ  ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಹಲವು ವಿದ್ಯಾಸಂಸ್ಥೆಗಳ ಮೂಲಕ ವಿದ್ಯಾದಾನ ಮಾಡುತ್ತ ಸಮಾಜಮುಖಿ, ಧಾರ್ಮಿಕ ಸಂಸ್ಥೆಗಳ ನಿರ್ಮಾತೃವಾಗಿದ್ದ ಮಹಾದಾನಿ ಉದ್ಯಮಿ ಡಾ|| ಆರ್.ಎನ್. ಶೆಟ್ಟಿ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ನೋವುಂಟಾಯಿತು. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬದವರಿಗೆ ಈ ನೋವನ್ನು ಭರಿಸುವ ಶಕ್ತಿ ಕರುಣಿಸಲಿ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ  ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next