Advertisement

ಬಸ್‌ಪಾಸ್‌: ರಾಜ್ಯ ಸರ್ಕಾರದ ನಿಲುವಿಗೆ ಎನ್ನೆಸ್‌ಯುಐ ವಿರೋಧ

11:35 AM Jul 10, 2017 | Team Udayavani |

ಬೆಂಗಳೂರು: ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ನೀಡುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ನಿರ್ಧಾರವನ್ನು ಅದೇ ಪಕ್ಷದ ವಿದ್ಯಾರ್ಥಿ ಸಂಘಟನೆಯಾಗಿರುವ ಎನ್‌ಎಸ್‌ಯುಐ ಆಕ್ಷೇಪ ವ್ಯಕ್ತಪಡಿಸಿದೆಯಲ್ಲದೇ, ಪ್ರತಿಭಟನೆಯ ಎಚ್ಚರಿಕೆ ಸಹ ನೀಡಿದೆ.

Advertisement

ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ಎನ್‌ಎಸ್‌ಯುಐ ರಾಜ್ಯ ಘಟಕದ ಕಾರ್ಯಕಾರಿಣಿಯಲ್ಲಿ ಈ ವಿಷಯದ ಬಗ್ಗೆ ಚರ್ಚೆ ನಡೆದಿದ್ದು, ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿದ್ಯಾರ್ಥಿ ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಎಚ್‌.ಎಸ್‌. ಮಂಜುನಾಥ್‌, ಜಾತಿ ಆಧಾರದಲ್ಲಿ ಪಾಸ್‌ ನೀಡುವುದು ಸರಿಯಲ್ಲ. ಎಲ್ಲ ವರ್ಗದ ಬಡ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಸೌಲಭ್ಯ ನೀಡಬೇಕು. ಇಲ್ಲದಿದ್ದರೆ ವಿದ್ಯಾರ್ಥಿಗಳ ಪರವಾಗಿ ಎನ್‌ಎಸ್‌ಯುಐ ಧ್ವನಿ ಎತ್ತಲಿದೆ ಎಂದರು. 

ರಾಜ್ಯದ ಕಾಲೇಜುಗಳಲ್ಲಿ ಕೋಮ ಭಾವನೆ ಕೆರಳಿಸುವಂತಹ ಕೆಲಸಗಳು ನಡೆಯುತ್ತಿವೆ. ಕೆಲವು ಪ್ರಾಧ್ಯಾಪಕರು ಒಂದು ಸಂಘಟನೆ, ಒಂದು ಪಕ್ಷಕ್ಕೆ ಬೆಂಬಲ ನೀಡುವ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ರಾಜ್ಯವ್ಯಾಪಿ ಕಾಲೇಜುಗಳಲ್ಲಿ ಕೋಮುಸೌಹಾರ್ದ ಕಾರ್ಯಕ್ರಮಗಳನ್ನು ನಡೆಸಲು ಕಾರ್ಯಕಾರಣಿಯಲ್ಲಿ ತೀರ್ಮಾನಿಸಲಾಗಿದೆ ಎನ್‌ಎಸ್‌ಯುಐನ ಎಂದು ವೆಂಕಟೇಶ್‌ ಇದೇ ವೇಳೆ ಮಾಹಿತಿ ನೀಡಿದರು. 

ಸಭೆಯಲ್ಲಿ ಎನ್‌ಎಸ್‌ಯುಐ ರಾಜ್ಯ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಇದಕ್ಕೂ ಮೊದಲು ಶೇಷಾದ್ರಿಪುರಂ ವೃತ್ತದ ಬಳಿ ಇರುವ ಮಾಜಿ ಪ್ರಧಾನಿ ದಿವಂಗತ ರಾಜೀವಗಾಂಧಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಗುಲಾಂ ನಬಿ ಆಜಾದ್‌ ಬೈಕ್‌ ರ್ಯಾಲಿಗೆ ಚಾಲನೆ ನೀಡಿದರು. ಈ ವೇಳೆ ಎನ್‌ಎಸ್‌ಯುಐ ರಾಷ್ಟ್ರೀಯ ಅಧ್ಯಕ್ಷ ಫೈರೋಜ್‌ ಖಾನ್‌ ಉಪಸ್ಥಿತರಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next