Advertisement

ಡಬ್ಬಿಂಗ್‌ ಕಾರ್ಯದಲ್ಲಿ ಬ್ಯುಸಿಯಾದ “ಸಿಂಗ’

05:57 AM Mar 03, 2019 | |

ಚಿರಂಜೀವಿ ಸರ್ಜಾ ನಾಯಕ ನಟನಾಗಿ ಅಭಿನಯಿಸುತ್ತಿರುವ “ಸಿಂಗ’ ಚಿತ್ರ ಸದ್ದಿಲ್ಲದೆ ತನ್ನ ಚಿತ್ರೀಕರಣವನ್ನು ಪೂರೈಸಿದೆ. “ಯುಕೆಎಂ ಸ್ಟುಡಿಯೋಸ್‌’ ಬ್ಯಾನರ್‌ನಲ್ಲಿ ಉದಯ್‌ ಕೆ. ಮೆಹ್ತಾ ನಿರ್ಮಿಸುತ್ತಿರುವ “ಸಿಂಗ’ ಚಿತ್ರವನ್ನು ಬೆಂಗಳೂರು, ಮೈಸೂರು ಮುಂತಾದ ಕಡೆ ಚಿತ್ರೀಕರಿಸಲಾಗಿದೆ.

Advertisement

ಸದ್ಯ ಚಿತ್ರದ ಶೂಟಿಂಗ್‌ ಮುಗಿಸಿ, ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಆಕಾಶ್‌ ರೆಕಾರ್ಡಿಂಗ್‌ ಸ್ಟುಡಿಯೋದಲ್ಲಿ ಚಿತ್ರದ ಮಾತಿನ ಜೋಡಣೆ ಕಾರ್ಯವನ್ನು ಆರಂಭಿಸಿದೆ. ಈ ಹಿಂದೆ “ರಾಮ್‌ಲೀಲಾ’ ಚಿತ್ರವನ್ನು ನಿರ್ದೇಶಿಸಿದ್ದ ವಿಜಯ್‌ ಕಿರಣ್‌ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಚಿತ್ರಕ್ಕೆ ಕಿರಣ್‌ ಹಂಪಾಪುರ ಛಾಯಾಗ್ರಹಣ, ಗಣೇಶ್‌ ಸಂಕಲನ ಕಾರ್ಯವಿದೆ. ಚಿತ್ರದ ಹಾಡುಗಳಿಗೆ ಧರ್ಮವಿಶ್‌ ಸಂಗೀತ ಸಂಯೋಜನೆಯಿದೆ. ಡಾ. ವಿ ನಾಗೇಂದ್ರ ಪ್ರಸಾದ್‌, ಕವಿರಾಜ್‌ ಹಾಗೂ ಚೇತನ್‌ ಚಿತ್ರದ ಹಾಡುಗಳಿಗೆ ಸಾಹಿತ್ಯ ಒದಗಿಸಿದ್ದಾರೆ.

“ಸಿಂಗ’ ಚಿತ್ರದಲ್ಲಿ ಚಿರಂಜೀವಿ ಸರ್ಜಾ ಅವರಿಗೆ ನಾಯಕಿಯಾಗಿ ಅದಿತಿ ಪ್ರಭುದೇವ ಜೋಡಿಯಾಗಿದ್ದಾರೆ. ಉಳಿದಂತೆ ರವಿಶಂಕರ್‌, ತಾರಾ, ಶಿವರಾಜ್‌ ಕೆ. ಆರ್‌ ಪೇಟೆ, ಅರುಣಾ ಬಾಲರಾಜ್‌, ರಂಜಿತಾ, ಚಂದ್ರಪ್ರಭ ಮೊದಲಾದ ಕಲಾವಿದರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next