Advertisement

ರೈತರ ಬೆಳೆ ಖರೀದಿಸಿ, ಬಡವರಿಗೆ ಹಂಚಿಕ

05:49 PM Apr 12, 2020 | mahesh |

ಕನಕಪುರ: ಲಾಕ್‌ಡೌನ್‌ನಿಂದಾಗಿ ರೈತರು ಸಂಕಷ್ಟಕ್ಕೀಡಾಗಿದ್ದು, ಕೃಷಿ ಉತ್ಪನ್ನ ಕನಿಷ್ಠ ಬೆಲೆಗೆ ಖರೀದಿಸಿ, ಬಡ ಜನರಿಗೆ ಉಚಿತವಾಗಿ ವಿತರಿಸಲಾಗುತ್ತಿದೆ ಎಂದು ಸಂಸದ ಡಿ.ಕೆ.ಸುರೇಶ್‌ ತಿಳಿಸಿದರು.

Advertisement

ನಗರದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ತರಕಾರಿ ತುಂಬಿದ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದರು. ದೇಶ ಬಾಧಿಸುತ್ತಿರುವ ಕೊರೊನಾ ಸೋಂಕಿನ ನಿಯಂತ್ರಣಕ್ಕೆ ಲಾಕ್‌ಡೌನ್‌ ಹೇರಲಾಗಿದೆ. ಆದರೆ ರೈತರಿಗೆ ಸೂಕ್ತ ಬೆಲೆ ಸಿಗದೆ ಕಂಗಾಲಾಗಿದ್ದಾರೆ. ಅದರಿಂದ ಆರ್ಥಿಕವಾಗಿ ಸಂಕಷ್ಟಕ್ಕೀಡಾಗಿರುವ ರೈತರಿಗೆ ಪರಿಹಾರ ಕಂಡುಕೊಳ್ಳುವ ದೃಷ್ಟಿಯಿಂದ ಜಿಲ್ಲೆಯಲ್ಲಿ ರೈತರು ಬೆಳೆದಿರುವ ಕ್ಯಾಪ್ಸಿಕಂ, ಎಲೆಕೋಸು, ಈರುಳ್ಳಿ, ಬೀಟ್ರೂಟ್‌, ಬಾಳೆಹಣ್ಣು, ಕಲ್ಲಂಗಡಿ, ಸೀಬೆಹಣ್ಣು, ಮತ್ತು ತರಕಾರಿಗಳನ್ನು ಕನಿಷ್ಠ ಬೆಲೆಗೆ ಖರೀದಿಸಿ, ಅವಶ್ಯವಿರುವ ರಾಮನಗರ, ಚನ್ನಪಟ್ಟಣ, ಕುಣಿಗಲ್‌, ಕನಕಪುರ ಸೇರಿದಂತೆ ಜಿಲ್ಲೆಯ ಹಲವು ಭಾಗಗಳಲ್ಲಿ ಬಿಪಿಎಲ್‌ ಕಾರ್ಡ್‌ ದಾರರಿಗೆ ಡಿ.ಕೆ.ಶಿವಕುಮಾರ್‌ ಡಿಕೆಎಸ್‌ ಚಾರಿಟಬಲ್‌ ಟ್ರಸ್ಟ್ ನೇತೃತ್ವದಲ್ಲಿ ಜನಪ್ರತಿನಿಧಿಗಳ ಸಹಯೋಗದೊಂದಿಗೆ ಉಚಿತವಾಗಿ ವಿತರಿಸಲಾಗುತ್ತಿದೆ.

ಇದರಿಂದ ರೈತರು ಆರ್ಥಿಕ ಸಂಕಷ್ಟದಿಂದ ಪಾರಾದರೆ, ಬಡವರು, ಕೂಲಿಕಾರ್ಮಿಕರಿಗೆ ಅನುಕೂಲ ವಾಗಲಿದೆ. ನಗರದ ರೇಷ್ಮೆ ಮಾರುಕಟ್ಟೆಯಲ್ಲಿ ರೇಷ್ಮೆ ಹೆಚ್ಚಾಗಿದ್ದು, ಬೆಲೆ ಕುಸಿಯತೊಡಗಿದೆ. ಹೀಗಾಗಿ ರೈತರು ಸ್ಥಳೀಯ ರೇಷ್ಮೆ ಇಲಾಖೆ ಅಧಿಕಾರಿಗಳಿಂದ ಅನುಮತಿ ಪತ್ರ ಪಡೆದು ಕೊಳ್ಳೇಗಾಲ ರೇಷ್ಮೆ
ಮಾರುಕಟ್ಟೆಗೆ ರೇಷ್ಮೆ ಸಾಗಣೆ ಮಾಡಲು ಜಿಲ್ಲೆಗಳ ಗಡಿ ಭಾಗದಲ್ಲಿ ಅವಕಾಶ ನೀಡಲು ಮಂಡ್ಯ ಮತ್ತು ರಾಮನಗರ ಪೊಲೀಸ್‌ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದರು. ವಿಧಾನ ಪರಿಷತ್‌ ಸದಸ್ಯ ಎಸ್‌.ರವಿ, ವಿಜಯ್‌ ದೇವ್‌, ದಿಲೀಪ್‌, ಆರ್‌. ಕೆ.ಕೃಷ್ಣಮೂರ್ತಿ ಮತ್ತು ನಗರಸಭೆ ಸದಸ್ಯರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next