ಗದಗ: ಬೆಂಬಲ ಬೆಲೆಯಲ್ಲಿ ಜಿಲ್ಲೆಯಲ್ಲಿ ಕಡ್ಲಿ ಹಾಗೂ ಜೋಳ ಖರೀದಿಸಲಾಗುತ್ತಿದ್ದು, ರೈತರಿಂದ ಹೆಚ್ಚು ಹೆಚ್ಚು ಉತ್ಪನ್ನ ಖರೀದಿಗೆ ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ನಡೆದ ವರ್ಚುವಲ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ರೈತರಿಗೆ ಬೆಂಬಲ ಬೆಳೆಯಲ್ಲಿ ಖರೀದಿಸುವ ಉತ್ಪನ್ನಗಳ ಬಗ್ಗೆ ಜಾಗೃತಿ ಮೂಡಿಸಿ, ರೈತರಿಂದ ಉತ್ಪನ್ನಗಳನ್ನುಖರೀದಿಸಿ ಅವರಿಗೆ ಸಹಕರಿಸಬೇಕು. ಈ ನಿಟ್ಟಿನಲ್ಲಿ ಕೃಷಿ ಅಧಿಕಾರಿಗಳಿಗೆ ಇತರ ಇಲಾಖೆ ಅಧಿಕಾರಿಗಳು ಸೂಕ್ತ ಸಹಕಾರ ನೀಡಬೇಕು. ಜಿಲ್ಲೆಯ ರೈತರಿಗೆ ಪರಿಹಾರ ನೀಡುವ ಬಗ್ಗೆ ತಾಲೂಕು ತಹಶೀಲ್ದಾರ್‌ರು ಶೀಘ್ರವಾಗಿ ಕಾರ್ಯ ನಿರ್ವಹಿಸಲು ಸೂಚಿಸಿ ರೈತರಿಗೆ ಪರಿಹಾರ ನೀಡಬೇಕೆಂದು ಹೇಳಿದರು.
ಮೂರನೇ ಹಂತದ ಕೋವಿಡ್ ಲಸಿಕೆ ನೀಡುವ ಕಾರ್ಯ ಜಿಲ್ಲೆಯಲ್ಲಿ ಆರಂಭವಾಗಿದ್ದು, ತಾಲೂಕುಆಡಳಿತ ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಮುಡಿಸುವ ಕಾರ್ಯ ಮಾಡಬೇಕು. 60 ವರ್ಷ ಮೇಲ್ಪಟ್ಟ ಎಲ್ಲರಿಗೂಲಸಿಕೆ ವಿತರಣೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ 8 ಆಸ್ಪತ್ರೆಯಲ್ಲಿ ಲಸಿಕೆ ನೀಡಲಾಗುತ್ತಿದೆ. ನೋಂದಣಿ ಬಗ್ಗೆ ಅರಿವು ಮೂಡಿಸಿ, ಲಸಿಕೆ ಪಡೆಯಲು ಪ್ರೇರೇಪಿಸಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|ಸತೀಶ್ ಬಸರಿಗಿಡದ ಮಾತನಾಡಿ, ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರದಿಂದ ಲಸಿಕೆ ನೀಡಲು ಕ್ರಮ ವಹಿಸಲಾಗಿದೆ. ಲಸಿಕೆ ನೀಡಿಕೆಬಗ್ಗೆ ಗುರಿ ನಿಗದಿಪಡಿಸಿಕೊಂಡು ಪ್ರಗತಿ ಸಾಧನೆ ಮಾಡಲಾಗುವುದು ಎಂದರು.
ಸಕಾಲ ಯೋಜನೆಯನ್ನು ಪರಿಣಾಮಕಾರಿಯಾಗಿಅನುಷ್ಠಾನಗೊಳಿಸಬೇಕು. ವಿನಾಕಾರಣ ಅರ್ಜಿತಿರಸ್ಕರಿಸದೇ ಉತ್ತಮ ಸೇವೆ ಒದಗಿಸಬೇಕು. ಸಕಾಲದಲ್ಲಿ 580 ಸೇವೆಗಳಿವೆ. ಸಾರ್ವಜನಿಕ ಸ್ಥಳಗಳಲ್ಲಿಸಕಲ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.ಜಿಲ್ಲಾಡಳಿತದ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆಸಂಬಂಧಿಸಿ ಹೆಚ್ಚಾಗಿ ಕಂದಾಯ ವಿಷಯಗಳ ಬಗ್ಗೆಹೆಚ್ಚು ಬೆಳಕು ಚೆಲ್ಲಿ, ಕಂದಾಯ ಸಮಸ್ಯೆಗಳ ಪರಿಹಾರಕ್ಕೆ ಹೆಚ್ಚು ಆದ್ಯತೆ ನೀಡಬೇಕು ಎಂದರು.
ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ ಅವರು ವಿವಿಧ ಇಲಾಖಾವಾರು ಪ್ರಗತಿ ಬಗ್ಗೆ ಮಾಹಿತಿ ಪಡೆದು ಅಗತ್ಯ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪಟಿ.ಎಸ್., ಭೂದಾಖಲೆಗಳ ಇಲಾಖೆ ಉಪನಿರ್ದೇಶಕ ರವಿಕುಮಾರ, ನಗರಾಭಿವೃದ್ಧಿ ಕೋಶದ ಕಾರ್ಯಪಾಲಕಅಭಿಯಂತರ ಅನಿಲಕುಮಾರ ಮುದ್ದಾ, ಜಿಲ್ಲಾ ಆರ್.ಸಿ.ಎಚ್. ಅ ಧಿಕಾರಿ ಡಾ|ಬಿ.ಎಂ.ಗೋಜನೂರ, ಜಿಲ್ಲಾಧಿಕಾರಿಗಳ ಕಚೇರಿ ಶಿರಸ್ತೇದಾರ್ ರೇವಣಕರ ಇತರರು ಹಾಜರಿದ್ದರು.