ಉಡುಪಿ: ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಮಲಾಕ್ಷಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಆರೋಪಿ ಬಿ.ವಿ. ಲಕ್ಷ್ಮೀನಾರಾಯಣನನ್ನು ಉಡುಪಿಯ ಸೆನ್ ಠಾಣೆಯ ಪೊಲೀಸರು 5 ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ಪೊಲೀಸರಿಂದ ಬಂಧಿಸಲ್ಪಟ್ಟು ಹಿರಿಯಡಕ ಸಬ್‌ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಯನ್ನು ವಿಚಾರಣೆಗಾಗಿ ತಮ್ಮ ಕಸ್ಟಡಿಗೆ ನೀಡಬೇಕೆಂದು ಸೆನ್ ಪೊಲೀಸರು ನ್ಯಾಯಾಲಯದಲ್ಲಿ ಕೋರಿಕೊಂಡ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಆರೋಪಿಯನ್ನು ಪೊಲೀಸರ ಕಸ್ಟಡಿಗೆ ನೀಡುವಂತೆ ಆದೇಶಿಸಿದರು.
ಆರೋಪಿ ಬಳಿಯಿದ್ದ ಜಿಲ್ಲೆ ಹಾಗೂ ಹೊರಜಿಲ್ಲೆಗಳಲ್ಲಿ ನಿವೇಶನಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಈಗಾಗಲೇ ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ತನಿಖೆಗೆ ಅಗತ್ಯವಿದ್ದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡು ಸಹಕಾರಿ ಸಂಘದ ಕಚೇರಿಯನ್ನು ಸೀಲ್ ಮಾಡಲಾಗಿದೆ.
ಇದನ್ನೂ ಓದಿ: ಫಿಲಿಪ್ಪೀನ್ಸ್‌ನಲ್ಲಿ ಪ್ರವಾಹ: ಸಾವಿನ ಸಂಖ್ಯೆ 51ಕ್ಕೆ ಏರಿಕೆ