Advertisement

ಬಿಡಬ್ಲ್ಯುಎಫ್ ರ್‍ಯಾಂಕಿಂಗ್‌: 9ನೇ ಸ್ಥಾನದಲ್ಲಿ ಲಕ್ಷ್ಯ ಸೇನ್‌

12:02 AM Sep 28, 2022 | Team Udayavani |

ಹೊಸದಿಲ್ಲಿ: ಹಲವು ಕೂಟಗಳಲ್ಲಿ ಶ್ರೇಷ್ಠ ನಿರ್ವಹಣೆ ನೀಡಿರುವ ಭಾರತದ ಸ್ಟಾರ್‌ ಶಟ್ಲರ್‌ ಎಚ್‌.ಎಸ್‌. ಪ್ರಣಯ್‌ ನೂತನ ಬಿಡಬ್ಲ್ಯುಎಫ್ ವಿಶ್ವ ರ್‍ಯಾಂಕಿಂಗ್‌ನಲ್ಲಿ ಮತ್ತೆ ಅಗ್ರ ಹದಿನೈದರೊಳಗಿನ ಸ್ಥಾನಕ್ಕೆ ಮರಳಿದ್ದಾರೆ.

Advertisement

ವಿಶ್ವ ಚಾಂಪಿಯನ್‌ಶಿಪ್‌ ಮತ್ತು ಜಪಾನ್‌ ಓಪನ್‌ ಸೂಪರ್‌ 750 ಕೂಟದಲ್ಲಿ ಕ್ವಾರ್ಟರ್‌ಫೈನಲ್‌ ಹಂತಕ್ಕೇರಿದ್ದ ಪ್ರಣಯ್‌ ಇದೀಗ 15ನೇ ಸ್ಥಾನಕ್ಕೇ ರಿದ್ದಾರೆ. ಯುವ ಲಕ್ಷ್ಯ ಸೇನ್‌ ಭಾರತದ ಅಗ್ರ ರ್‍ಯಾಂಕಿನ ಆಟಗಾರರಾಗಿ ಮುಂದುವರಿದಿದ್ದಾರೆ. ಅವರು 9ನೇ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ.

ಗಾಯದ ಸಮಸ್ಯೆಯಿಂದ ವಿಶ್ವ ಚಾಂಪಿಯನ್‌ಶಿಪ್‌ ಮತ್ತು ಜಪಾನ್‌ ಓಪನ್‌ನಿಂದ ಹಿಂದೆ ಸರಿದಿದ್ದ ಎರಡು ಬಾರಿಯ ಒಲಿಂಪಿಕ್‌ ಪದಕ ವಿಜೇತೆ ಪಿ.ವಿ. ಸಿಂಧು ಆರನೇ ಸ್ಥಾನದಲ್ಲಿ ಉಳಿದಿದ್ದಾರೆ. ಇದೇ ವೇಳೆ ಸೈನಾ ನೆಹ್ವಾಲ್‌ 31ನೇ ಸ್ಥಾನ ಪಡೆದಿದ್ದಾರೆ.

ಡಬಲ್ಸ್‌ನಲ್ಲಿ ಸಾತ್ವಿಕ್‌ಸಾಯಿರಾಜ್‌ ರಾಂಕಿರೆಡ್ಡಿ ಮತ್ತು ಚಿರಾಗ್‌ ಶೆಟ್ಟಿ ಎಂಟನೇ ಸ್ಥಾನ ಉಳಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next