Advertisement
ಉತ್ತರಾಖಂಡದ ಮಂಗಲೂರಿನಲ್ಲಿ ನಡೆದ ಹಿಂಸಾಚಾರದಲ್ಲಿ 4 ಮಂದಿ ಗಾಯಗೊಂಡಿದ್ದಾರೆ. ಅಲ್ಲದೇ ಬೂತ್‌ನಲ್ಲಿ ಬೆಂಕಿ ಹಚ್ಚಲಾಗಿತ್ತು ಎಂದು ಸಹ ವರದಿಗಳು ತಿಳಿಸಿವೆ. ಪಶ್ಚಿಮ ಬಂಗಾಳದ ಬಾಗ್ಧಾಹ್ ಮತ್ತು ರಣಘಾಟ್ ದಕ್ಷಿಣ ಕ್ಷೇತ್ರಗಳಲ್ಲಿ ಹಿಂಸಾಚಾರ ನಡೆದಿದೆ. ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಜಟಾಪಟಿಗಳು ನಡೆದಿವೆ. ಇದಕ್ಕೆ ಪ್ರತಿಕ್ರಿಯಿಸಿರುವ ಟಿಎಂಸಿ ತನ್ನ ವಿರುದ್ಧ ಹುರುಳಿಲ್ಲದ ಆರೋಪಗಳನ್ನು ಮಾಡ ಲಾಗುತ್ತಿದೆ ಎಂದು ಹೇಳಿದೆ. ಹಿಮಾಚಲ ಪ್ರದೇಶ ಸಿಎಂ ಸುಖ್‌ವಿಂದರ್ ಸಿಂಗ್ ಸುಖು ಪತ್ನಿ ಕಮಲೇಶ್ ಠಾಕೂರ್ ಸ್ಪರ್ಧಿಸಿದ್ದರು. ಶಾಸಕರ ಸಾವು ಮತ್ತು ರಾಜೀನಾಮೆಯ ಹಿನ್ನೆಲೆಯಲ್ಲಿ ಈ ಚುನಾವಣೆಯನ್ನು ನಡೆಸಲಾಗಿತ್ತು. ಜು. 13ರಂದು ಫಲಿತಾಂಶ ಪ್ರಕಟವಾಗಲಿದೆ.
Advertisement
By-Election: ಉತ್ತರಾಖಂಡ, ಬಂಗಾಳದಲ್ಲಿ ಹಿಂಸಾಚಾರ…
11:13 PM Jul 10, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.