Advertisement

ಉಪಚುನಾವಣೆ 2019; 13 ಕ್ಷೇತ್ರಗಳಲ್ಲಿ ಅಖಾಡಕ್ಕಿಳಿದಿದ್ದ ಅನರ್ಹ ಶಾಸಕರಲ್ಲಿ ಇಬ್ಬರಿಗೆ ಸೋಲು

10:42 AM Dec 13, 2019 | Nagendra Trasi |

ಬೆಂಗಳೂರು: ಹದಿನೈದು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಬಿಜೆಪಿ 12ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ. ಇದರಲ್ಲಿ 13 ಅನರ್ಹ ಶಾಸಕರ ಪೈಕಿ ಇಬ್ಬರು ಮಾತ್ರ ಪರಾಜಯಗೊಂಡಿದ್ದಾರೆ. ತೀವ್ರ ಕುತೂಹಲ ಕೆರಳಿಸಿದ್ದ ಹುಣಸೂರು ಮತ್ತು ಹೊಸಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಸೋಲನ್ನನುಭವಿಸಿದ್ದಾರೆ.

Advertisement

ಹುಣಸೂರು ಉಪಚುನಾವಣೆಯ ಮತಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿಯ ಎಚ್.ವಿಶ್ವನಾಥ್ ವಿರುದ್ಧ ಕಾಂಗ್ರೆಸ್ ನ ಎಚ್.ಪಿ.ಮಂಜುನಾಥ್ 39,709 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಹೊಸಕೋಟೆಯಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಎಂಟಿಬಿ ನಾಗರಾಜ್ ಅವರಿಗಿಂತ ಹತ್ತು ಸಾವಿರ ಮತಗಳ ಮುನ್ನಡೆ ಸಾಧಿಸಿದ್ದು, ಗೆಲುವಿನ ಹೊಸ್ತಿಲಿನಲ್ಲಿದ್ದಾರೆ.

1)ಕೆಆರ್ ಪುರದಲ್ಲಿ ಬೈರತಿ ಬಸವರಾಜ್, 2)ಯಶವಂತಪುರದಲ್ಲಿ  ಎಸ್ ಟಿ ಸೋಮಶೇಖರ್, 3)ಚಿಕ್ಕಬಳ್ಳಾಪುರದಲ್ಲಿ ಡಾ.ಕೆ.ಸುಧಾಕರ್, 4)ಗೋಕಾಕ್ ನಲ್ಲಿ ರಮೇಶ್ ಜಾರಕಿಹೊಳಿ, 5)ಅಥಣಿಯಲ್ಲಿ ಮಹೇಶ್ ಕುಮಟಳ್ಳಿ, 6)ಕಾಗವಾಡದಲ್ಲಿ ಶ್ರೀಮಂತ ಪಾಟೀಲ್, 7)ಹಿರೇಕೆರೂರಿನಲ್ಲಿ ಬಿಸಿ ಪಾಟೀಲ್, 8)ಯಲ್ಲಾಪುರದಲ್ಲಿ ಶಿವರಾಮ್ ಹೆಬ್ಬಾರ್, 9)ವಿಜಯನಗರದಲ್ಲಿ ಆನಂದ್ ಸಿಂಗ್ ಗೆಲುವು ಸಾಧಿಸಿದ್ದಾರೆ. ಇವರೆಲ್ಲಾ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಗೆದ್ದಿದ್ದರು.

10) ಮಹಾಲಕ್ಷ್ಮೀ ಲೇಔಟ್ ನಲ್ಲಿ ಕೆ.ಗೋಪಾಲಯ್ಯ, 11) ಕೆಆರ್ ಪೇಟೆಯಲ್ಲಿ ನಾರಾಯಣಗೌಡ ಗೆಲುವು ಸಾಧಿಸಿದ್ದು, ಕಳೆದ ಚುನಾವಣೆಯಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿ ಜಯ ಸಾಧಿಸಿದ್ದರು.  12)ರಾಣೆಬೆನ್ನೂರಿನಲ್ಲಿ ಬಿಜೆಪಿಯ ಅರುಣ್ ಪೂಜಾರ್ ಜಯ ಸಾಧಿಸಿದ್ದಾರೆ.

ಬಿಜೆಪಿ ಸೋತ ಕ್ಷೇತ್ರಗಳು ಯಾವುವು:

Advertisement

ಹುಣಸೂರು ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಎಚ್.ವಿಶ್ವನಾಥ್ ಸೋಲನ್ನನುಭವಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿ ಗೆದ್ದಿದ್ದರು. ಈ ಬಾರಿ ಕಾಂಗ್ರೆಸ್ ನ ಮಂಜುನಾಥ್ ಗೆಲುವು ಸಾಧಿಸಿದ್ದಾರೆ. ಹೊಸಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಸೋಲಿನತ್ತ ಮುಖಮಾಡಿದ್ದಾರೆ. ಕಳೆದ ಬಾರಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಎಂಟಿಬಿ ಗೆದ್ದಿದ್ದರು. ಈ ಬಾರಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಗೆಲುವಿನತ್ತ ಹೆಜ್ಜೆಹಾಕಿದ್ದಾರೆ. ಶಿವಾಜಿನಗರದಲ್ಲಿ ಬಿಜೆಪಿ ಅಭ್ಯರ್ಥಿ ಸರವಣ ಸೋಲನ್ನನುಭವಿಸಿದ್ದು, ಕಾಂಗ್ರೆಸ್ ನ ರಿಜ್ವಾನ್ ಜಯ ಸಾಧಿಸಿದ್ದಾರೆ. ಕಳೆದ ಬಾರಿ ರೋಷನ್ ಬೇಗ್ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಜಯ ಸಾಧಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next