Advertisement

ಉಪ ಚುನಾವಣೆ ಮೈತ್ರಿ: ಕಾಂಗ್ರೆಸ್‌ ಹೈಕಮಾಂಡ್‌ ಜತೆ ಚರ್ಚಿಸಿ ತೀರ್ಮಾನ

11:11 PM Aug 02, 2019 | Team Udayavani |

ಬೆಂಗಳೂರು: “ಹದಿನೇಳು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಮೈತ್ರಿಗೆ ಸಂಬಂಧಿಸಿ ದಂತೆ ಕಾಂಗ್ರೆಸ್‌ ಹೈಕಮಾಂಡ್‌ ಜತೆ ಮಾತನಾಡಿ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ’ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ತಿಳಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿ, “ಉಪ ಚುನಾವಣೆ ಕುರಿತು ರಾಜ್ಯ ಕಾಂಗ್ರೆಸ್‌ ನಾಯಕರು ಶುಕ್ರವಾರ ಸಭೆ ನಡೆಸಿದ್ದು ಮಾಧ್ಯಮಗಳಲ್ಲಿ ನೋಡಿದ್ದೇನೆ. ಉಪ ಚುನಾವಣೆ ವಿಚಾರ ಇನ್ನೂ ಸುಪ್ರೀಂಕೋರ್ಟ್‌ ಅಂಗಳದಲ್ಲಿದೆ.

Advertisement

ಕಾಂಗ್ರೆಸ್‌ ಹೈಕಮಾಂಡ್‌ ಜತೆ ಚರ್ಚಿಸಿದ ನಂತರವೇ ನಮ್ಮ ಪಕ್ಷದ ನಿಲುವು ಅಂತಿಮವಾಗಲಿದೆ’ ಎಂದು ಹೇಳಿದರು. “ನಮ್ಮದು ಪ್ರಾದೇಶಿಕ ಪಕ್ಷ. ಎರಡು ರಾಷ್ಟ್ರೀಯ ಪಕ್ಷಗಳ ನಡುವೆ ಬೆಳೆಯಬೇಕು. ಪ್ರಾದೇಶಿಕ ಪಕ್ಷವಾಗಿ ಜೆಡಿಎಸ್‌ ಹಲವು ಹೋರಾಟಗಳನ್ನು ಮಾಡುತ್ತಾ ಬಂದಿದೆ. ಅನಿವಾರ್ಯತೆ ಹಾಗೂ ರಾಜ್ಯದ ದೃಷ್ಟಿಯಿಂದ ಆಯಾ ಸಂದರ್ಭ ಗಳಲ್ಲಿ ಕೆಲ ತೀರ್ಮಾನ ಕೈಗೊಂಡಿದೆ. ಆದರೆ, ಯಾರಿಗೆ ನಷ್ಟ, ಯಾರಿಗೆ ಲಾಭ ಎಂಬ ವಿಚಾರ ಚರ್ಚೆ ಮಾಡಲು ಬಯಸುವುದಿಲ್ಲ’ ಎಂದರು.

ಪ್ರಜ್ವಲ್‌ ರೇವಣ್ಣ ಕುರಿತು ಪ್ರತಿಕ್ರಿಯಿಸಿದ ದೇವೇಗೌಡರು, “ಇತ್ತೀಚೆಗೆ ಸಂಸತ್‌ನಲ್ಲಿ ಪ್ರಜ್ವಲ್‌ ಮಾತನಾಡಿದ್ದು ಮಾಧ್ಯಮ ಗಳ ಮೂಲಕ ನೋಡಿದ್ದೇನೆ. ದೇಶವೇ ಅದನ್ನು ನೋಡಿದೆ. ಪ್ರಜ್ವಲ್‌ ಕೇವಲ ಹಾಸನಕ್ಕೆ ಮಾತ್ರ ಸೀಮಿತವಲ್ಲ, ರಾಜ್ಯ ಹಾಗೂ ದೇಶದ ಬಗ್ಗೆ ಮಾತನಾಡಬೇಕಿದೆ’ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸವಿತಾ ಸಮುದಾಯದ ಮುಖಂಡರು ಜೆಡಿಎಸ್‌ಗೆ ಸೇರ್ಪಡೆ ಗೊಂಡರು. ನಗರ ಘಟಕದ ಅಧ್ಯಕ್ಷ ಪ್ರಕಾಶ್‌, ವಿಧಾನಪರಿಷತ್‌ನ ಮಾಜಿ ಸದಸ್ಯ ರಮೇಶ್‌ಬಾಬು, ಮುಖಂಡ ಆರ್‌.ವಿ.ಹರೀಶ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next