Advertisement

By Election: ದ. ಕನ್ನಡ ಸ್ಥಳೀಯ ಸಂಸ್ಥೆಗಳ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ

04:36 PM Sep 19, 2024 | Team Udayavani |

ಉಡುಪಿ: ಸಂಸದ ಕೋಟ ಶ್ರೀನಿವಾಸ್ ಪೂಜಾರಿ (Kota Shrinivas Poojary) ಅವರಿಂದ ತೆರವಾದ ವಿಧಾನ ಪರಿಷತ್ತಿನ ಉಪಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗಿದೆ. ಭಾರತೀಯ ಚುನಾವಣಾ ಆಯೋಗವು ಸೆ.19ರಂದು ಚುನಾವಣೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.

Advertisement

ವಿಧಾನ ಪರಿಷತ್ತಿನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಅಕ್ಟೋಬರ್‌ 21ರಂದು ಮತದಾನ ನಡೆಯಲಿದೆ ಎಂದು ಘೋಷಿಸಿದೆ.

ಈ ಕ್ಷೇತ್ರದಿಂದ ಪರಿಷತ್‌ ಸದಸ್ಯರಾಗಿದ್ದ ಕೋಟ ಶ್ರೀನಿವಾಸ್‌ ಪೂಜಾರಿ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಆಯ್ಕೆಯಾಗಿದ್ದರು. ಹೀಗಾಗಿ ಈ ಕ್ಷೇತ್ರದಲ್ಲಿ ಮತ್ತೆ ಚುನಾವಣೆ ನಡೆಯಲಿದೆ.

ನಾಮಪತ್ರ ಸಲ್ಲಿಕೆಗೆ ಅ.3 ಕೊನೆಯ ದಿನಾಂಕವಾಗಿದ್ದು, ಅ.21ರಂದು ಮತದಾನ ನಡೆಯಲಿದೆ. ಅ.21ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಅ.24ರಂದು ಮತ ಎಣಿಕೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next