Advertisement
ಭಾನುವಾರ ಸಿಂದಗಿ ವಿಧಾನಸಭೆ ಉಪ ಚುನಾವಣೆ ಪ್ರಚಾರ ಸಂದರ್ಭದಲ್ಲಿ ಕೊಕಟನೂರು ಗ್ರಾಮದಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಉಣ್ಣೆ ಕಂಬಳ ಹೊದ್ದುಕೊಂಡ ಎಲ್ಲರಿಗೂ ಅದರ ಯೋಗ್ಯತೆ ಬರುವುದಿಲ್ಲ. ಹಾಲುಮತದ ಸಮಾಜಕ್ಕೆ ಸರಿಯಾದ ಅಭಿವೃದ್ಧಿ ಮಾಡಿದವರಿಗೆ ಮಾತ್ರ ಆ ಯೋಗ್ಯತೆ ಪ್ರಾಪ್ತವಾಗುತ್ತದೆ ಎಂದು ಕುಟುಕಿದರು.
Related Articles
Advertisement
ಹಾಲುಮತ ಸಮಾಜ ಇಂದಿಗೂ ಅದೇ ಸ್ಥಿತಿಯಲ್ಲಿದೆ. ಸಣ್ಣ ಸಣ್ಣ ಕಸುಬುಗಳನ್ನು ಮಾಡುವವರು ಸಹ ಅದೇ ಸ್ಥಿತಿಯಲ್ಲಿದ್ದಾರೆ. ಅಲ್ಪಸಂಖ್ಯಾತರಿಗೆ ಈ ಹಿಂದಿನ ಸರ್ಕಾರಗಳು ಕೇವಲ ಚುನಾವಣೆಗೆ ಬಳಸಿಕೊಂಡರು ಅವರನ್ನು ಅಂಧಕಾರದಲ್ಲಿ ಇಟ್ಟಿದ್ದಾರೆ ಎಂದು ತಿಳಿಸಿದ ಅವರು ಅಲ್ಪಸಂಖ್ಯಾತರು ಮತ್ತು ಹಿಂದುಳಿದವರ ಮಕ್ಕಳು ಮುಂದಕ್ಕೆ ಬಂದು ಅಭಿವೃದ್ಧಿ ಹೊಂದಬೇಕಾದರೆ ಬಿಜೆಪಿ ಯಿಂದ ಮಾತ್ರ ಸಾಧ್ಯ. ಹೀಗಾಗಿ ಬಿಜೆಪಿ ಅಭಿವೃದ್ಧಿಗೆ ರಮೇಶ ಭೂಸನೂರ ಅವರನ್ನು ಗೆಲ್ಲಿಸಿ ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಿ ಎಂದರು
ಉ ಕ ಅಭಿವೃದ್ಧಿಗೆ ಸರಕಾರದ ಆದ್ಯತೆ :
ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ನೀರಾವರಿ, ಗ್ರಾಮೀಣ ರಸ್ತೆಗಳ ಅಭಿವೃದ್ಧಿ, ವಸತಿ ಸೌಲಭ್ಯ ಸೇರಿದಂತೆ ಈ ಭಾಗದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ವಿವರಿಸಿದರು.
ಇದಲ್ಲದೇ ನಮ್ಮ ಸರ್ಕಾರ ಪ್ರಸಕ್ತ ವರ್ಷ ಹೆಚ್ಚುವರಿಯಾಗಿ 5 ಲಕ್ಷ ಮನೆಗಳನ್ನು ನಿರ್ಮಿಸಲು ಯೋಜಿಸಿದೆ. ಇದರಲ್ಲಿ ಸಿಂದಗಿ ಕ್ಷೇತ್ರಕ್ಕೆ 5 ಸಾವಿರ ಮನೆ ನೀಡಲಾಗುತ್ತದೆ. ಅಮೃತ ಯೋಜನೆ ಅಡಿಯಲ್ಲಿ 2 ಸಾವಿರ ಮನೆಗಳನ್ನು ಮಂಜೂರು ಮಾಡಲಾಗುತ್ತದೆ. ಹೀಗೆ 1 ವರ್ಷದಲ್ಲಿ ಸಿಂದಗಿ ಕ್ಷೇತ್ರದಲ್ಲಿ 7 ಸಾವಿರ ಮನೆ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದರು.
ಸಿಂದಗಿ ಭಾಗದಲ್ಲಿ ಚಿಮ್ಮಲಗಿ ಏತ ನೀರಾವರಿ ಅಡಿ ಬರುವ ಕೋರವಾರ ಉಪ ಕಾಲುವೆ ಟೆಂಡರ್ ಕಾರ್ಯ ಈಗಾಗಲೇ ಪೂರ್ಣಗೊಂಡಿದೆ. ಇದರಿಂದ 80 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ಕಲ್ಪಿ ಸಲಾಗುತ್ತದೆ. ಇಂಡಿ ಮತ್ತು ಗುತ್ತಿ ಬಸವಣ್ಣ ಯೋಜನೆಗಳ ಪುನಃಶ್ಚೇತನ ಮಾಡಲಾಗುತ್ತಿದೆ ಎಂದು ಕೇಳಿದರು.