ರಾಮನಗರ: ಚನ್ನಪಟ್ಟಣ ಉಪಚುನಾವಣೆ ಟಿಕೆಟ್ಗಾಗಿ ಸಿ.ಪಿ. ಯೋಗೇಶ್ವರ್ ಪರ ದಿಲ್ಲಿಯಲ್ಲಿ ಲಾಬಿ ಆರಂಭಿಸಿರುವ ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದ ಬಿಜೆಪಿ ನಾಯಕರ ತಂಡ ಗುರುವಾರ ಬೆಳಗ್ಗೆ ಕೆಂದ್ರ ಸಚಿವ ಪ್ರಹ್ಲಾದ್ ಜೋಶಿ ಮನೆಯಲ್ಲಿ ಸಭೆ ನಡೆಸಿರುವ ಮಾಹಿತಿ ಲಭ್ಯವಾಗಿದೆ.
ಸಭೆಯಲ್ಲಿ ಚನ್ನಪಟ್ಟಣ ಉಪಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆದಿದೆ. ಕ್ಷೇತ್ರವನ್ನು ಬಿಜೆಪಿಗೆ ಉಳಿಸಿಕೊಳ್ಳುವ ಬಗ್ಗೆ ಪ್ರಹ್ಲಾದ್ ಜೋಶಿಗೆ ರಾಜ್ಯ ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.
ಬಿಜೆಪಿ ಚಿಹ್ನೆಯಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಡಿ. ಅವರು ಜೆಡಿಎಸ್ನಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಲಿ. ಫ್ರೆಂಡ್ಲಿ ಫೈಟ್ ಆಡೋಣ ಎಂದು ಯೋಗೇಶ್ವರ್ ತಿಳಿಸಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.
ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸುತ್ತಿದ್ದೇನೆ. ಅಭ್ಯರ್ಥಿ ಯಾರೆಂದು ಮೈತ್ರಿ ವರಿಷ್ಠರು ತೀರ್ಮಾನಿಸಲಿದ್ದಾರೆ. ಕ್ಷೇತ್ರದಲ್ಲಿ ಎನ್ಡಿಎ ಅಭ್ಯರ್ಥಿ ಗೆಲ್ಲಬೇಕು. ಅದಕ್ಕಾಗಿ ಪಕ್ಷದ ಕಾರ್ಯಕರ್ತರು ಸಜ್ಜಾಗಬೇಕೆಂಬ ನಿಟ್ಟಿನಲ್ಲಿ ನಿರಂತರವಾಗಿ ಸಂಚರಿಸುತ್ತಿದ್ದೇನೆ .
– ನಿಖಿಲ್ ಕುಮಾರಸ್ವಾಮಿ
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ