Advertisement

By Election: ಚನ್ನಪಟ್ಟಣ ಮುಖಂಡರ ಜತೆ ಸಿಎಂ ಸಿದ್ದರಾಮಯ್ಯ ಸಭೆ

12:14 AM Sep 05, 2024 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಚನ್ನಪಟ್ಟಣದ ಸ್ಥಳೀಯ ಮುಖಂಡರೊಂದಿಗೆ ಉಪ ಚುನಾವಣೆ ಸಿದ್ಧತೆಗಳು, ಅಭ್ಯರ್ಥಿ ಮತ್ತಿತರ ವಿಷಯಗಳ ಕುರಿತು ಚರ್ಚೆ ನಡೆಸಿದರು.

Advertisement

ಚುನಾವಣೆ ಯಾವುದೇ ಕ್ಷಣದಲ್ಲಿ ಪ್ರಕಟಗೊಳ್ಳಬಹುದು. ಇದಕ್ಕೆ ಎಲ್ಲ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳಬೇಕು. ಅಭ್ಯರ್ಥಿ ಆಯ್ಕೆ ಶೀಘ್ರ ಅಂತಿಮಗೊಳ್ಳಲಿದೆ. ಪಕ್ಷದ ಗೆಲುವಿಗೆ ಎಲ್ಲರೂ ಶ್ರಮಿಸಬೇಕು ಎಂದು ಸೂಚಿಸಿದರು ಎನ್ನಲಾಗಿದೆ. ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಮಾಜಿ ಸಂಸದ ಡಿ.ಕೆ.ಸುರೇಶ್‌, ಚನ್ನಪಟ್ಟಣ ಉಪಚುನಾವಣೆ ಕಾಂಗ್ರೆಸ್‌ ಅಭ್ಯರ್ಥಿ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ.

ಮಾಜಿ ಶಾಸಕ ಸಿ.ಪಿ. ಯೋಗೇಶ್ವರ್‌ ಅವರನ್ನು ಕರೆತರುವ ಅನಿವಾರ್ಯತೆಯೂ ನಮಗಿಲ್ಲ. ಅಷ್ಟಕ್ಕೂ ಅವರು (ಯೋಗೇಶ್ವರ್‌) ಯಾವುದರಲ್ಲಿ ಇದ್ದಾರೆ ಅಂತಾನೇ ಗೊತ್ತಿಲ್ಲ. ಯಾಕೆಂದರೆ, ಒಮ್ಮೆ ಪಕ್ಷೇತರನಾಗಿ ಸ್ಪರ್ಧಿಸುವುದಾಗಿ ಹೇಳುತ್ತಾರೆ. ಮತ್ತೊಮ್ಮೆ ಬಿಜೆಪಿಯಿಂದ ಕಣಕ್ಕಿಳಿಯುವುದಾಗಿ ಪ್ರಕಟಿಸುತ್ತಾರೆ. ಇನ್ನೊಮ್ಮೆ ಜೆಡಿಎಸ್‌ಗೆ ಬಿಟ್ಟು ಕೊಡುವುದಾಗಿ ಹೇಳಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.