Advertisement
ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್ ಪ್ರಬಲ ಆಕಾಂಕ್ಷಿಯಾಗಿದ್ದು, ಈಗಾಗಲೇ ಕೇಂದ್ರ ನಾಯಕರನ್ನೂ ಭೇಟಿ ಮಾಡಿದ್ದ ವಿಪಕ್ಷ ನಾಯಕ ಆರ್. ಅಶೋಕ್ ಸೇರಿದಂತೆ ಇನ್ನಿತರರ ನಾಯ ಕರು ಇದನ್ನು ಮನವರಿಕೆ ಮಾಡಿಕೊಟ್ಟಿದ್ದರು. ಸೋಮವಾರ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಪಕ್ಷದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅಧ್ಯಕ್ಷತೆಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಈ ವಿಚಾರ ಪ್ರತಿಧ್ವನಿಸಿದ್ದು, ಸಂಡೂರನ್ನು ಜೆಡಿ ಎಸ್‌ಗೆ ಬಿಟ್ಟುಕೊಟ್ಟು ಚನ್ನಪಟ್ಟಣವನ್ನು ಕೇಳಲು ಕೇಂದ್ರ ನಾಯಕರನ್ನು ಮುಂದಿನ ದಿನಗಳಲ್ಲಿ ಮನವೊಲಿಸಿ, ಮಿತ್ರಪಕ್ಷವಾಗಿರುವ ಜೆಡಿಎಸ್ ಜತೆಗೂ ಮಾತುಕತೆ ನಡೆಸಲು ಚರ್ಚೆಯಾಗಿದೆ ಎಂದು ಉನ್ನತ ಮೂಲಗಳು ಹೇಳಿವೆ.ಮಿತ್ರಪಕ್ಷ, ಕೇಂದ್ರ ನಾಯಕರೊಂದಿಗೆ ಚರ್ಚೆ
ಸಭೆ ಬಳಿಕ ಪತ್ರಿಗೋಷ್ಠಿಯಲ್ಲಿ ಮಾತನಾಡಿದ ಮೇಲ್ಮನೆ ಸದಸ್ಯ ಸಿ.ಟಿ. ರವಿ, ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ, ಚನ್ನಪಟ್ಟಣ, ಸಂಡೂರು, ಶಿಗ್ಗಾವಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸಂಬಂಧಿಸಿದಂತೆ ಮಿತ್ರಪಕ್ಷವಾದ ಜೆಡಿಎಸ್ ಮತ್ತು ಕೇಂದ್ರ ನಾಯಕರೊಂದಿಗೆ ಚರ್ಚಿಸಿ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸುವ ಅಧಿಕಾರವನ್ನು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರರಿಗೆ ನೀಡಲಾಗಿದೆ ಎಂದರು.
ಜನಾಂದೋಲನ:
ಈ ಸರಕಾರದ ಹಿಂದೂ ವಿರೋಧಿ ನೀತಿ, ಗಣೇಶೋತ್ಸವದ ಮೇಲೆ ನಿರ್ಬಂಧ ಹೇರುತ್ತಿರುವುದು, ಗಣೇಶೋತ್ಸವ ಮೆರವಣಿಗೆಯಲ್ಲಿ ಪಾಲ್ಗೊಳ್ಳದಂತೆ ವಿಶ್ವ ಹಿಂದೂ ಪರಿಷತ್, ಹಿಂದೂ ಜಾಗರಣ ವೇದಿಕೆ, ಬಜರಂಗದಳದ ಮುಖಂಡರ ಮೇಲೆ ದಿಗ್ಬಂಧನವನ್ನು ಹಾಕುತ್ತಿರುವುದು, ಓಲೈಕೆಯ ರಾಜಕಾರಣ ಕುರಿತು ಚರ್ಚಿಸಿದ್ದೇವೆ. ಈ ಸಂಬಂಧ ಪರಿವಾರ ಸಂಘಟನೆಗಳ ಪ್ರಮುಖರ ಜೊತೆ ಸಮಾಲೋಚನೆ ನಡೆಸಿ ಹೋರಾಟ ನಡೆಸುವ ಚಿಂತನೆ ನಡೆದಿದೆ ಎಂದರು. ಸಭೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ವಿಪಕ್ಷದ ನಾಯಕ ಆರ್. ಅಶೋಕ್, ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಮಾಜಿ ಡಿಸಿಎಂ ಡಾ| ಸಿ.ಎನ್. ಅಶ್ವತ್ಥನಾರಾಯಣ ಮೊದಲಾದವರಿದ್ದರು.