Advertisement

ಉಪ ಚುನಾವಣೆ ದಿಕ್ಸೂಚಿಯಲ್ಲ: ಪರಂ

06:55 AM Oct 23, 2018 | Team Udayavani |

ಬೆಳಗಾವಿ: ಮುಂದಿನ ಲೋಕಸಭೆ ಚುನಾವಣೆಗೆ ಈಗ ನಡೆಯುತ್ತಿರುವ ಉಪಚುನಾವಣೆ ದಿಕ್ಸೂಚಿಯಲ್ಲ. ಐದೂ ಕ್ಷೇತ್ರಗಳಲ್ಲಿ ಸಮ್ಮಿಶ್ರ ಸರಕಾರಕ್ಕೆ ಗೆಲುವು ಸಿಗಲಿದೆ ಎಂದು ಉಪಮುಖ್ಯಮಂತ್ರಿ ಡಾ|ಜಿ.ಪರಮೇಶ್ವರ್‌ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಲ್ಲಿ ಮತ್ತೂಮ್ಮೆ ಬಿಜೆಪಿ ಅಧಿಕಾರಕ್ಕೆ ಬರಬಾರದು ಎನ್ನುವುದು ಜನರ ಅಭಿಪ್ರಾಯವಾಗಿದ್ದು, ಸಮ್ಮಿಶ್ರ ಸರಕಾರಕ್ಕೆ ಈ ಚುನಾವಣೆ ಶಕ್ತಿ ತುಂಬಲಿದೆ ಎಂದರು.

ಸಚಿವರಾದ ರಮೇಶ ಜಾರಕಿಹೊಳಿ ಹಾಗೂ ಡಿ.ಕೆ. ಶಿವಕುಮಾರ ನಡುವಿನ ಭಿನ್ನಾಭಿಪ್ರಾಯದ  ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ್‌, ಅವರಿಬ್ಬರೂ ಮೊದಲಿನಿಂದಲೂ ಸ್ನೇಹಿತರು. ಈ ತರಹ ಮಾತನಾಡುವುದು ಸಹಜವಾಗಿ ಬಿಟ್ಟಿದೆ. ಬಹಿರಂಗವಾಗಿ ಇಂಥ ಹೇಳಿಕೆ ನೀಡದಂತೆ ಇಬ್ಬರಿಗೂ ಸೂಚಿಸಲಾಗುವುದು ಎಂದು ಹೇಳಿದರು.

ಪ್ರತಿವರ್ಷ ಕರ್ನಾಟಕ ರಾಜ್ಯೋತ್ಸವದಂದು ಎಂಇಎಸ್‌ ಕರಾಳ ದಿನ ಆಚರಿಸುತ್ತಿದ್ದು, ಈ ಸಲವೇನೂ ಅದು ಹೊಸದಲ್ಲ. ಆದರೆ ಕರಾಳ ದಿನಾಚರಣೆ ಬಗ್ಗೆ ಕಾನೂನು ಚೌಕಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
– ಡಾ| ಜಿ. ಪರಮೇಶ್ವರ್‌, ಉಪಮುಖ್ಯಮಂತ್ರಿ

Advertisement

Udayavani is now on Telegram. Click here to join our channel and stay updated with the latest news.

Next