ಮತದಾನ ನಡೆಯುತ್ತಿದ್ದು, 2 ಕ್ಷೇತ್ರಗಳಲ್ಲಿ ಮಧ್ಯಾಹ್ನ 3 ಗಂಟೆಯ ವೇಳೆಗೆ 60 ಶೇಕಡಾ ಮತದಾನವಾಗಿರುವ ಬಗ್ಗೆ ವರದಿಯಾಗಿದೆ.
Advertisement
ಗುಂಡ್ಲುಪೇಟೆಯಲ್ಲಿ ಪತಿ ಮಹದೇವ್ ಪ್ರಸಾದ್ ಅವರ ಸಮಾಧಿಗೆ ಕುಟುಂಬ ಸದಸ್ಯರೊಂದಿಗೆ ಪೂಜೆ ಸಲ್ಲಿಸಿದ ಬಳಿಕಕಾಂಗ್ರೆಸ್ ಅಭ್ಯರ್ಥಿ ಗೀತಾ ಅವರು ಮತ ಚಲಾಯಿಸಿದರು.
ಗುಂಡ್ಲುಪೇಟೆಯ ಬೇಳೂರಿನ ಮತಗಟ್ಟೆಯ ಬಳಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ತೀವ್ರ ವಾಗ್ವಾದ ನಡೆದು ಕೈ-ಕೈ ಮಿಸಲಾಯಿಸಿದ ಬಗ್ಗೆ ವರದಿಯಾಗಿದೆ.
Related Articles
Advertisement
ನಂಜನಗೂಡಿನ ಮಹದೇವನಗರದಲ್ಲಿ ಮತದಾರರರು ಮತದಾನ ಬಹಿಷ್ಕರಿಸಿದ್ದಾರೆ.
ಗುಂಡ್ಲುಪೇಟೆಯ ಕೆಲವೆಡೆ ಮತ ಯಂತ್ರಗಳು ಕೈಕೊಟ್ಟು ಮತದಾನ ವಿಳಂಳಬವಾಗಿದೆ.
ಮಾಜಿ ಸಚಿವ ಎಚ್.ಎಸ್. ಮಹದೇವಪ್ರಸಾದ್ ಅವರ ಅಕಾಲಿಕ ನಿಧನದಿಂದಾಗಿ ತೆರವಾಗಿರುವ ಸ್ಥಾನಕ್ಕೆ ಗುಂಡ್ಲುಪೇಟೆಯಲ್ಲಿ ಮತದಾನ ನಡೆಯುತ್ತಿದ್ದರೆ, ಮಾಜಿ ಸಚಿವ ಶ್ರೀನಿವಾಸ ಪ್ರಸಾದ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರಿದ್ದರಿಂದ ನಂಜನಗೂಡಿನಲ್ಲಿ ಚುನಾವಣೆ ನಡೆಯುತ್ತಿದೆ. ಉಭಯ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ನೇರ ಸ್ಪರ್ಧೆ ಇದೆ.
ಬೆಳಗ್ಗೆ 7 ರಿಂದ ಆರಂಭವಾದ ಮತದಾನ ಸಂಜೆ 5 ಗಂಟೆವರೆಗೆ ನಡೆಯಲಿದೆ. ಈ ಮಧ್ಯೆ, ಪಂಚರಾಜ್ಯಗಳ ಚುನಾವಣೆ ವೇಳೆ ಮತಯಂತ್ರಗಳ ಬಗ್ಗೆ ಸಾಕಷ್ಟು ದೂರುಗಳು ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಮತದಾನ ಆರಂಭಕ್ಕೂ ಮುನ್ನ, ಬೆಳಗ್ಗೆ 6 ಗಂಟೆಗೆ ಕಣದಲ್ಲಿರುವ ಅಭ್ಯರ್ಥಿಗಳು ಅಥವಾ ಅವರ ಪರವಾರ ಏಜೆಂಟರ ಸಮ್ಮುಖದಲ್ಲಿ ಅಣಕು ಮತದಾನ ನಡೆಸಲಾಯಿತು. ಏ.13ರಂದು ಮತಗಳ ಎಣಿಕೆ ನಡೆಯಲಿದ್ದು ಗೀತಾ ಮಹದೇವಪ್ರಸಾದ್, ಶ್ರೀನಿವಾಸ ಪ್ರಸಾದ್ ಹಾಗೂ ಕಳಲೆ ಕೇಶವಮೂರ್ತಿ ಮತತು ನಿರಂಜನ್ ಅವರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.
ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವಿವಿ ಪ್ಯಾಟ್ ಇದ್ದು, ಮತದಾರ ತಾನು ಯಾರಿಗೆ ಮತ ಚಲಾಯಿಸಿದ್ದೇನೆ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಬಹುದಾಗಿದೆ. ಈ ಮಧ್ಯೆ, ಶಾಂತಿಯುತವಾಗಿ ಮತದಾನ ನಡೆಸಲು ಜಿಲ್ಲಾಡಳಿತಗಳು ಸಕಲ ಸಿದ್ದತೆ ನಡೆಸಿದ್ದು, ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಕ್ಷೇತ್ರ ವ್ಯಾಪ್ತಿಯಲ್ಲಿ ಭಾನುವಾರ ನಡೆಯುವ ಎಲ್ಲಾ ಸಂತೆ, ಜಾತ್ರೆ, ಉತ್ಸವ ಇತ್ಯಾದಿಗಳನ್ನು ಮುಂದೂಡಲಾಗಿದೆ. ಉಭಯ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ಕಾರ್ಖಾನೆಗಳು ಹಾಗೂ ಇತರ ಖಾಸಗಿ ಸಂಸ್ಥೆಗಳಿಗೆ ವೇತನ ಸಹಿತ ರಜೆ ಘೋಷಿಸಲಾಗಿದೆ.