Advertisement
ಬೆಳಿಗ್ಗೆ ಏಳು ಗಂಟೆಗೆ ಚುನಾವಣಾ ಸಿಬಂದಿಗಳು ರಾಜಕೀಯ ನಾಯಕರು ಹಾಗೂ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಮತ ಎಣಿಕಾ ಕೇಂದ್ರದ ಸ್ಟ್ರಾಂಗ್ ರೂಮ್ ತೆರೆದು ಮತ ಎಣಿಕೆ ಕಾರ್ಯಕ್ಕೆ ಅನುವು ಮಾಡಿ ಕೊಟ್ಟಿದ್ದು ಅದರಂತೆ ಮೂರೂ ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.
Related Articles
Advertisement
ಶಿಗ್ಗಾವಿ ಕ್ಷೇತ್ರ:
ಹಾವೇರಿ: ತೀವ್ರ ಕುತೂಹಲ ಕೆರಳಿಸಿರುವ ಶಿಗ್ಗಾವಿ ಉಪ ಚುನಾವಣೆಯ ಮತ ಎಣಿಕೆ ದೇವಗಿರಿಯ ಸರ್ಕಾರಿ ಎಂಜನಿಯರಿಂಗ್ ಕಾಲೇಜಿನಲ್ಲಿ ಬೆಳಗ್ಗೆ 8 ಗಂಟೆಗೆ ಆರಂಭವಾಯಿತು.
ಮತಪೆಟ್ಟಿಗೆಗಳನ್ನು ಇಟ್ಟಿದ್ದ ಸ್ಟ್ರಾಂಗ್ ರೂಮ್ ಅನ್ನು ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಚುನಾವಣಾಧಿಕಾರಿ ಮಹಮ್ಮದ್ ಖೀಜರ್, ಪೊಲೀಸ್ ವರಿಷ್ಠಾಧಿಕಾರಿ ಅಂಶಕುಮಾರ ಹಾಗೂ ಅಭ್ಯರ್ಥಿಗಳ ಏಜೆಂಟರ ಸಮ್ಮುಖದಲ್ಲಿ ತೆರೆಯಲಾಯಿತು. ಒಟ್ಟು 14 ಸುತ್ತುಗಳಲ್ಲಿ ಮತ ಎಣಿಕೆ ನಡೆಯಲಿದ್ದು, ಮಧ್ಯಾಹ್ನದ ವೇಳೆ ಫಲಿತಾಂಶದ ಚಿತ್ರಣ ಹೊರಬಿಳಲಿದೆ.
ಇವಿಎಂ ಮತಗಳ ಎಣಿಕೆ ಕಾರ್ಯಕ್ಕೆ 14 ಟೇಬಲ್, ಅಂಚೆ ಮತಪತ್ರ ಎಣಿಕೆಗೆ 1 ಟೇಬಲ್ ಹಾಗೂ ಸೇವಾ ಮತದಾರರ ಅಂಚೆ ಮತಪತ್ರ ಎಣಿಕೆಗಾಗಿ 1 ಟೇಬಲ್ ಸಿದ್ದಪಡಿಸಲಾಗಿದೆ. ಪ್ರತಿ ಟೆಬಲ್ ಗೆ ಒಬ್ಬರು ಎಣಿಕೆ ಮೇಲ್ವಿಚಾರಕರು, ಒಬ್ಬರು ಎಣಿಕೆ ಸಹಾಯಕರು ಹಾಗೂ ಒಬ್ಬರು ಎಣಿಕೆ ಮೈಕ್ರೋ ಅಬ್ಬರವರ್ ನೇಮಕ ಮಾಡಲಾಗಿದೆ.
ಬಿಗಿ ಬಂದೋಬಸ್ತ್.. ಎಣಿಕೆ ಕೇಂದ್ರದ ಬಂದೋಬಸ್ತ್ ಗೆ ಪೊಲೀಸ್ ಇಲಾಖೆಯಿಂದ ನಾಲ್ಕು ಡಿಎಸ್‌ಪಿ, ಒಂಭತ್ತು ಸಿಪಿಐ, 25 ಪಿಎಸ್ಐ, 29- ಎಎಸ್ಐ, 250 ಎಚ್.ಸಿ/ಪಿಸಿ ಹಾಗೂ ಕೆಎಸ್‌ಆರ್‌ಪಿಯ ಎರಡು ತುಕಡಿಗಳನ್ನು ಮತ್ತು ನಾಲ್ಕು ಡಿ.ಆರ್. ತುಕಡಿಗಳು ಭದ್ರತೆಗಾಗಿ ನಿಯೋಜಿಸಲಾಗಿದೆ. ಮತ ಎಣಿಕೆ ಕೇಂದ್ರ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮಾಡಲಾಗಿದೆ. ಶೇ. 80.48 ಮತದಾನ..
ಉಪಚುನಾವಣೆಯಲ್ಲಿ ಶೇ. 80.72ರಷ್ಟು ಮತದಾನವಾಗಿದ್ದು 98,642 ಪುರುಷರು, 92,522 ಮಹಿಳೆಯರು, ಇತರೆ ಇಬ್ಬರು ಸೇರಿ 1,91,166 ಮತದಾರರು ಹಕ್ಕು ಚಲಾಯಿಸಿದ್ದು, ಫಲಿತಾಂಶ ತೀವ್ರ ಕುತೂಹಲ ಮೂಡಿಸಿದೆ. 8 ಅಭ್ಯರ್ಥಿಗಳು ಕಣದಲ್ಲಿ..
ಚುನಾವಣೆಯಲ್ಲಿ ಒಟ್ಟು 26 ಅಭ್ಯರ್ಥಿಗಳಿಂದ 46 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಪರಿಶೀಲನೆಯ ವೇಳೆಯಲ್ಲಿ 7 ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತವಾಗಿದ್ದವು. 11 ಅಭ್ಯರ್ಥಿಗಳು ನಾಮಪತ್ರ ಹಿಂಪಡೆದ ಬಳಿಕ ಅಂತಿಮವಾಗಿ 8 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದು ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.