Advertisement

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

12:25 AM Nov 09, 2024 | Team Udayavani |

ಸಂಡೂರು: ಮೂರು ಕ್ಷೇತ್ರಗಳ ಉಪಚುನಾವಣೆಯ ಪ್ರಚಾರ ಕಾವು ಬಿರುಸುಗೊಂಡಿದ್ದು ಕಣದಲ್ಲಿ ಕಾಂಗ್ರೆಸ್‌ ಹಾಗೂ ಮೈತ್ರಿ ಪಕ್ಷಗಳ ನಾಯಕರ ವಾಗ್ಯುದ್ಧ ತಾರಕಕ್ಕೇರಿದೆ. ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್‌ ಸರಕಾರ ಕಿತ್ತೊಗೆಯಬೇಕು. ಇನ್ನುಕೆಲವೇ ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದು ಜೈಲಿಗೂ ಹೋಗುವುದು ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಭವಿಷ್ಯ ನುಡಿದ್ದಾರೆ.

Advertisement

ಸಂಡೂರು ಕ್ಷೇತ್ರದಲ್ಲಿ ಶುಕ್ರವಾರ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಮಾಡಿದ  ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಪರ ಪ್ರಚಾರದಲ್ಲಿ ಮಾತನಾಡಿ, ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಯಾಗುತ್ತಿದೆ. ಇನ್ನು ಸಿಬಿಐ, ಇಡಿ ತನಿಖೆಯಾಗಲಿದೆ ಎಂದರು. ಖಜಾನೆ ಲೂಟಿ ಹೊಡೆಯುತ್ತಿರುವ ಸಿದ್ದರಾಮಯ್ಯ ಸರಕಾರ ಹಗಲು ದರೋಡೆ ಮಾಡುತ್ತಿದ್ದು, ಜನ ಕೊಟ್ಟ ತೆರಿಗೆ ಹಣವನ್ನು ಕಾಂಗ್ರೆಸ್‌ನವರು ಲೂಟಿ ಮಾಡಿದ್ದಾರೆ. ಬಡವರ ಅಭಿವೃದ್ಧಿ ಕೆಲಸ ನಿಂತು ಹೋಗಿದೆ. ನೀರಾವರಿ ಯೋಜನೆಗಳು ಇಲ್ಲವಾಗಿವೆ. ನನ್ನ ಆಡಳಿತದಲ್ಲಿ ಮಹಿಳೆಯರಿಗೆ ಕೊಟ್ಟ ಭಾಗ್ಯಲಕ್ಷ್ಮೀ ಯೋಜನೆ ಕೂಡ ನಿಲ್ಲಿಸಿ ಹೆಣ್ಣು ಮಕ್ಕಳಿಗೆ ದ್ರೋಹ ಮಾಡಿದ್ದಾರೆ ಎಂದು ಟೀಕಿಸಿದರು.

ಕಿಸಾನ್‌ ಸಮ್ಮಾನ್‌ ಯೋಜನೆಯಡಿ ಕೇಂದ್ರ ಸರ್ಕಾರ 6 ಸಾವಿರ ಕೊಟ್ಟರೆ ರಾಜ್ಯದಿಂದ 4 ಸಾವಿರ ಕೊಡುತ್ತಿದ್ದೆ. ಆದರೆ ಭ್ರಷ್ಟ ಕಾಂಗ್ರೆಸ್‌ ಸರ್ಕಾರ ಅದನ್ನೂ ನಿಲ್ಲಿಸಿದೆ. ಬಡವರು, ರೈತರು ಬದುಕುವುದು ದುಸ್ತರವಾಗಿದೆ. ವಿದ್ಯುತ್‌ ದರ ಹೆಚ್ಚಾಗಿದೆ. ದುಡಿಯುವ ಕೈಗಳಿಗೆ ಕೆಲಸವಿಲ್ಲ ಎಂದರು.

ಇಡಿ, ಸಿಬಿಐಯಿಂದ ಸಿಎಂ ಬಂಧನ ಸಾಧ್ಯತೆ: ಜನಾರ್ದನ ರೆಡ್ಡಿ
ಬಳ್ಳಾರಿ: ಮುಡಾ ಪ್ರಕರಣಲ್ಲಿ ಎ1 ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನ. 23ರ ಬಳಿಕ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು ಖಚಿತವಾಗಿದೆ. ಶೀಘ್ರವೇ ಇ.ಡಿ., ಸಿಬಿಐನಿಂದ ಬಂಧಿಸುವ ಸಾಧ್ಯತೆಯೂ ಇದೆ ಎಂದು ಗಂಗಾವತಿ ಶಾಸಕ ಜಿ. ಜನಾರ್ದನ ರೆಡ್ಡಿ ಸುದ್ದಿಗಾರರ ಜತೆ ಹೇಳಿದರು.

ಸಿದ್ದರಾಮಯ್ಯ ಇ.ಡಿ., ಸಿಬಿಐಯಿಂದ ಬಂಧನವಾಗಿ ಜೈಲಿಗೆ ಹೋಗುವುದು ನೂರಕ್ಕೆ ನೂರರಷ್ಟು ಸತ್ಯ. ಆದ್ದರಿಂದ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಹೈಕಮಾಂಡ್‌ನಿಂದ ಆದೇಶ ಬಂದಿದ್ದು ನ. 23ರ ಅನಂತರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next