ಬೆಂಗಳೂರು: ಸಿಂಧಗಿ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಅನುರಿಸಬೇಕಾದ ಕಾರ್ಯತಂತ್ರ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಸಮಾಲೋಚನೆ ನಡೆಸಿದರು.
ಹಾನಗಲ್ ರೀತಿ ಸಿಂಧಗಿಯಲ್ಲೂ ಜೆಡಿಎಸ್ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಿರುವುದರಿಂದ ಯಾವ ರೀತಿ ಪಕ್ಷದ ಗೆಲುವಿಗೆ ಹೆಜ್ಜೆ ಇಡಬೇಕು ಎಂಬ ಬಗ್ಗೆ ಸ್ಥಳೀಯ ಮುಖಂಡರ ಜತೆ ಚರ್ಚಿಸಿದರು.
ಈಗಾಗಲೇ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಸಚಿವ ಎಂ.ಸಿ.ಮನಗೊಳಿ ಅವರ ಪುತ್ರ ಅಶೋಕ್ ಮನಗೊಳಿ ಅವರನ್ನು ಘೋಷಿಸಿರುವುದರಿಂದ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಜೆಡಿಎಸ್ ಮತ ವಿಭಜನೆಗಾಗಿಯೇ ಅಲ್ಪಸಂಖ್ಯಾಕರ ಅಭ್ಯರ್ಥಿಗೆ ಟಿಕೆಟ್ ನೀಡಿರುವ ಬಗ್ಗೆ ಸಮುದಾಯದಲ್ಲಿ ಮನವರಿಕೆ ಮಾಡಿಕೊಡಬೇಕು ಎಂದು ಸೂಚನೆ ನೀಡಿದರು.
ಇದನ್ನೂ ಓದಿ:ವೃದ್ಧಾಶ್ರಮಗಳಿಗೆ ನೀಡುವ ಅನುದಾನ 15 ಲಕ್ಷ ರೂ.ಗೆ ಏರಿಕೆ: ಸಿಎಂ
ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಂ ಅಹಮದ್, ಮಾಜಿ ಸಚಿವರಾದ ಎಂ.ಬಿ.ಪಾಟೀಲ್ ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು.