Advertisement

By Election: ಮಾತೃ ಹೃದಯಗಳಲ್ಲಿ ಕಣ್ಣೀರು ಸಹಜ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ

01:17 AM Nov 04, 2024 | Team Udayavani |

ಮೈಸೂರು: ಭಯ, ಭಕ್ತಿ ಇಲ್ಲದವರ ಕಣ್ಣಲ್ಲಿ ನೀರು ಬರುವುದಿಲ್ಲ. ಆದರೆ, ಮಾತೃ ಹೃದಯವನ್ನು ಹೊಂದಿರುವವರಲ್ಲಿ ಕಣ್ಣೀರು ಬರುವುದು ಸಹಜ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

Advertisement

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಹಲವು ಬಾರಿ ಜನರ ಸಮಸ್ಯೆ ನೋಡಿ ಕಣ್ಣೀರು ಹಾಕಿದ್ದೇನೆಯೇ ಹೊರತು ಅನುಕಂಪ ಗಿಟ್ಟಿಸಿಕೊಳ್ಳುವುದಕ್ಕಲ್ಲ. ಜನರ ಸಮಸ್ಯೆ ಕಂಡಾಗ ಮಾತೃ ಹೃದಯ ಇದ್ದವರಿಗೆ ಕಣ್ಣೀರು ಬರುತ್ತದೆ. ರಾಜಕಾರಣದಲ್ಲಿ ಕಟುಕರಿದ್ದಾರೆ, ಭಯ ಭಕ್ತಿ ಇಲ್ಲದವರ ಕಣ್ಣಲ್ಲಿ ನೀರು ಬರುವುದಿಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್‌ ನಾಯಕರಿಗೆ ತಿರುಗೇಟು ನೀಡಿದರು.

ಪ್ರಧಾನಿ ಮೋದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ಪುಢಾರಿ ಎಂದು ಟೀಕಿಸಿದ್ದಾರೆ. ಅವರನ್ನು ಪುಢಾರಿ ಅನ್ನುವುದಾರೆ ಇವರು ಅದೇ ರೀತಿ ಮಾತನಾಡುತ್ತಿರುವುದು ಅಲ್ಲವೇ ಎಂದು ಕಿಡಿಕಾರಿದರು. ಗ್ಯಾರಂಟಿ ಯೋಜನೆ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಪ್ರತಿಕ್ರಿಯಿಸಿದ್ದಾರೆ. ಮತ್ತೊಂದೆಡೆ ಜನರೇ ಬೇಡ ಎನ್ನುತ್ತಿದ್ದಾರೆ ಎನ್ನುವ ಮಾತುಗಳನ್ನು ಆಡುವ ಮೂಲಕ ಸಾರ್ವಜನಿಕರ ಹೆಸರೇಳಿ ಸಬೂಬು ಕೊಡುತ್ತಿದ್ದಾರೆ ಎಂದು ದೂರಿದ್ದಾರೆ.

“ಮುಡಾ ಪ್ರಕರಣದಿಂದ ಸಿಎಂಗೆ ಭಕ್ತಿ ಹೆಚ್ಚಳ’: ಎಚ್‌ಡಿಕೆ ಲೇವಡಿ
ಮುಡಾ ಪ್ರಕರಣದಿಂದಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಈಗ ದೇವರ ಮೇಲೆ ಹೆಚ್ಚಿನ ಭಕ್ತಿ ಬಂದಿದೆ. ಇತ್ತೀಚೆಗೆ ದೇವರನ್ನು ಹುಡುಕಿಕೊಂಡು ದೇವಸ್ಥಾನಗಳಿಗೆ ಹೋಗುತ್ತಿದ್ದಾರೆ. ಹಣೆಗೆ ಕುಂಕುಮ ಹಚ್ಚಿಕೊಳ್ಳುತ್ತಿದ್ದಾರೆ ಎಂದು ಕೇಂದ್ರದ ಸಚಿವ ಎಚ್‌.ಡಿ. ಕುಮಾರಸ್ವಾಮಿ ಲೇವಡಿ ಮಾಡಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮುಡಾ ವಿಚಾರ ಮುನ್ನೆಲೆಗೆ ಬಂದ ಮೇಲಂತೂ ಸಿದ್ದರಾಮಯ್ಯ ಅವರಿಗೆ ದೇವರು, ದೇವಸ್ಥಾನ, ಮಠ-ಮಾನ್ಯಗಳು ನೆನಪಾಗುತ್ತಿವೆ. ಅಪಾರ ಭಕ್ತಿ ಬಂದಿದೆ. ಮೊದಲು ಹಣೆಗೆ ಕುಂಕುಮ ಹಚ್ಚಿಕೊಳ್ಳುತ್ತಿರಲಿಲ್ಲ, ಈಗ ಹುಡುಕಿಕೊಂಡು ಹೋಗಿ ದೇವರ ದರ್ಶನ ಮಾಡುತ್ತಿದ್ದಾರೆ. ಇದೆಲ್ಲಾ ಮುಡಾ ಪ್ರಕರಣದ ಪ್ರಭಾವವಾಗಿದೆ ಎಂದು ಕುಟುಕಿದರು.

Advertisement

ರಾಜ್ಯ ಒಂದು ತಪ್ಪು ಮುಚ್ಚಿಕೊಳ್ಳಲು ಮತ್ತೂಂದು ತಪ್ಪು ಮಾಡುತ್ತಿದೆ. ಇವರ ಸ್ಥಿತಿ ಈಗ ದೀಪಕ್ಕೆ ಸಿಕ್ಕ ಪತಂಗದಂತಾಗಿದೆ. ಕಾಂಗ್ರೆಸ್ಸಿನ ಈ ವಿಚಾರಗಳು ಉಪ ಚುನಾವಣೆ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳುವುದಿಲ್ಲ. ಉಪಚುನಾವಣೆ ನಡೆಯುವುದೇ ಬೇರೆ ರೀತಿ. ಪ್ರಚಾರಕ್ಕೆ ಬರುವವರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಜಿ.ಟಿ. ದೇವೇಗೌಡರು ಎರಡನೇ ಹಂತದ ನಾಯಕರಿಗೆ ಅವಕಾಶ ಕಲ್ಪಿಸಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next