Advertisement
ನಾನು ರಾಜ್ಯಾಧ್ಯಕ್ಷನಾಗಿ ಅಧಿಕಾರ ಸ್ವೀಕರಿಸಿದಾಗ ಕರಾವಳಿಯಂತೆಯೇ ರಾಜ್ಯದಲ್ಲಿ ಸಂಘಟನೆ ಮಾಡು ತ್ತೇವೆ ಎಂದಿದ್ದೆ. ಆದರೆ ಆಗ ಕೆಲವರು ಕೇಸರಿ ಮುಂದಿಟ್ಟುಕೊಂಡು ಸಂಘಟಿಸು ತ್ತಾರೆ ಎಂದು ಟೀಕಿಸಿದ್ದರು. ನಾವು ಇಲ್ಲಿನಂತೆಯೇ ಉಪ ಚುನಾವಣೆಯಲ್ಲಿ ಸಂಘಟನೆ ಮಾಡಿದ್ದು, ಯಶಸ್ವಿಯಾಗಿದೆ. ಕರಾವಳಿಯಲ್ಲಿ ಪ್ರತಿ ಮತಗಟ್ಟೆಯನ್ನು ಬಲಿಷ್ಠಗೊಳಿಸಿ ರುವಂತೆ ರಾಜ್ಯದ ಇತರ ಜಿಲ್ಲೆಗಳ ಮತಗಟ್ಟೆಗಳನ್ನು ಕೂಡ ಪೇಜ್ ಪ್ರಮುಖ್ ಮೂಲಕ ಬಲಿಷ್ಠಗೊಳಿಸಲಾಗುವುದು. ಮುಂದಿನ ಚುನಾವಣೆಯಲ್ಲಿ 150ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುವ ನಿಟ್ಟಿನಲ್ಲಿ ಕೆಲಸ ನಡೆಯಲಿದೆ. ರಾಜ್ಯಾಧ್ಯಕ್ಷನಾಗಿ ಅಧಿಕಾರ ಸ್ವೀಕರಿಸಿದ ಕೂಡಲೇ ಬೆಂಗಳೂರು ಮೇಯರ್ ಆಯ್ಕೆ, ನಗರ ಸ್ಥಳೀಯಾಡಳಿತ ಚುನಾವಣೆ ಮತ್ತು ಉಪಚುನಾವಣೆ ಗಳು ಎದುರಾದವು. ಎಲ್ಲವನ್ನೂ ಯಶಸ್ವಿಯಾಗಿ ಎದುರಿಸಲು ಸಾಧ್ಯ ವಾಗಿದೆ ಎಂದು ನಳಿನ್ ಹೇಳಿದರು.
ದ.ಕ. ಜಿಲ್ಲೆಯಲ್ಲಿ ಈ ಬಾರಿ ಶೇ.90 ರಷ್ಟು ಪಂ.ಗಳಲ್ಲಿ ಗೆಲುವು ಸಾಧಿಸುವ ಗುರಿಯನ್ನಿಟ್ಟು ಕೆಲಸ ಮಾಡಬೇಕಿದೆ. ಈ ಮೂಲಕ ಜಿಲ್ಲೆಯನ್ನು ಕಾಂಗ್ರೆಸ್ ಮುಕ್ತಗೊಳಿಸಬೇಕು ಎಂದರು. ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವೇದವ್ಯಾಸ ಕಾಮತ್, ಡಾ| ಭರತ್ ಶೆಟ್ಟಿ, ಸಂಜೀವ ಮಠಂದೂರು, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಮಾಜಿ ಶಾಸಕ ಯೋಗೀಶ್ ಭಟ್ ಉಪಸ್ಥಿತರಿದ್ದರು. ರವಿಶಂಕರ್ ಮಿಜಾರ್ ಕಾರ್ಯಕ್ರಮ ನಿರ್ವಹಿಸಿದರು. ವಿಮಾನ ನಿಲ್ದಾಣದಿಂದ ಪಕ್ಷದ ಕಚೇರಿವರೆಗೆ ನಳಿನ್ ಅವರನ್ನು ಮೆರವಣಿಗೆಯಲ್ಲಿ ಕರೆತರಲಾಯಿತು.
Related Articles
ರಾಜ್ಯ ದೇಶದ ಜನತೆ ಬಿಜೆಪಿಯನ್ನು ಆಶೀರ್ವದಿಸಿದ್ದಾರೆ. ಮತದಾರರು ನಮ್ಮ ಮೇಲಿಟ್ಟ ವಿಶ್ವಾಸಕ್ಕೆ ಚ್ಯುತಿ ಬಾರದಂತೆ ಸಮಸ್ಯೆಗಳಿಗೆ ಸ್ಪಂದಿಸಬೇಕಿದೆ. ಕೇಂದ್ರ -ರಾಜ್ಯ ಅನುದಾನಗಳನ್ನು ಬಳಸಿ ಅಭಿವೃದ್ಧಿ ಕೆಲಸಗಳಿಗೆ ಆದ್ಯತೆ ನೀಡ ಬೇಕಾಗಿದೆ. ಪೌರತ್ವ ತಿದ್ದುಪಡಿ ಮಸೂದೆಯ ಮೂಲಕ ಮೋದಿ ನೇತೃತ್ವದ ಸರಕಾರ ಹಿಂದೂಗಳಿಗೆ ರಕ್ಷಣೆ ನೀಡುವ ಕೆಲಸ ಮಾಡಿದೆ. ಮೋದಿ ಅವಧಿ ಯಲ್ಲಿಯೇ ರಾಮ ಮಂದಿರ ನಿರ್ಮಾಣವಾಗುವ ವಿಶ್ವಾಸವಿದೆ ಎಂದರು.
Advertisement
ಹೆದ್ದಾರಿ: ಸಚಿವರ ಜತೆ ಚರ್ಚೆರಾ.ಹೆ. ಕಾಮಗಾರಿ ತೊಂದರೆಗಳ ಬಗ್ಗೆ ಗುರುವಾರ ಮತ್ತೂಮ್ಮೆ ಕೇಂದ್ರ ಸಚಿವರ ಜತೆಗೆ ಚರ್ಚಿಸಿದ್ದು, 15 ದಿನಗಳೊಳಗೆ ಪರಿಹಾರ ಒದಗಿಸುವ ಭರವಸೆ ನೀಡಿದ್ದಾರೆ. ಜಿಲ್ಲೆಯ ಹೊಸ ರೈಲ್ವೇ ಕಾಮಗಾರಿಗಳು ಶೀಘ್ರ ಆರಂಭಗೊಳ್ಳಲಿವೆ. ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದರು.