Advertisement
ಕ್ಷೇತ್ರದಲ್ಲಿ 305 ಮತಗಟ್ಟೆಗಳನ್ನು ಸ್ಥಾಪಿಸಿದ್ದು, ಕೊರೊನಾ ಸೋಂಕಿತರಿಗಾಗಿ ಸಂಜೆ ಆರು ಗಂಟೆ ಮೇಲೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇನ್ನೂ ಮೊದಲಿಗೆ ಮತ ಚಲಾಯಿಸುತ್ತಿದ್ದ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ರಿಗೆ ಕೋವಿಡ್ ಪಾಸಿಟಿವ್ ಇರುವ ಕಾರಣ ಸಂಜೆ 6ರಿಂದ 7 ಗಂಟೆವರೆಗೂ ಹಕ್ಕು ಚಲಾಯಿಸುತ್ತಿದ್ದಾರೆ.
Related Articles
Advertisement
ಬೆಳಗಾವಿ ಲೋಕಸಭಾ ಕ್ಷೇತ್ರ ಹಾಗೂ ಮಸ್ಕಿ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ತೀವ್ರ ಪೈಪೋಟಿಗೆ ಕಾರಣವಾಗಿದೆ. ಸುರೇಶ ಅಂಗಡಿ ನಿಧನದಿಂದ ತೆರವಾದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಮಂಗಲಾ ಸುರೇಶ ಅಂಗಡಿ, ಕಾಂಗ್ರೆಸ್ ನಿಂದ ಸತೀಶ ಜಾರಕಿಹೊಳಿ ಸೇರಿದಂತೆ 10 ಮಂದಿ ಕಣದಲ್ಲಿದ್ದಾರೆ.
ಬಸವಕಲ್ಯಾಣ ಶಾಸಕರಾಗಿದ್ದ ಬಿ.ನಾರಾಯಣರಾವ್ ಅವರು ಕೋವಿಡ್‌ನಿಂದ ನಿಧನರಾಗಿದ್ದರಿಂದ ಆ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದ್ದು, ಇಲ್ಲಿ ಕಾಂಗ್ರೆಸ್ ನಿಂದ ಮಾಲಾ, ಬಿಜೆಪಿಯ ಶರಣು ಸಲಗರ, ಜೆಡಿಎಸ್‌ನ ಸಯ್ಯದ್ ಯಸ್ರಬ್ ಅಲಿ ಖಾದ್ರಿ, ಪಕ್ಷೇತರರಾಗಿರುವ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಸೇರಿ 12 ಅಭ್ಯರ್ಥಿಗಳು ಕಣದಲ್ಲಿದ್ದಾರೆ.