Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಬಿ. ಶ್ರೀರಾಮುಲು ಅಸಮಾಧಾನಗೊಂಡಿಲ್ಲ. ಗುರುವಾರ ನಾನು, ಶ್ರೀರಾಮುಲು, ಜನಾರ್ದನ ರೆಡ್ಡಿ ಸೇರಿ ಚುನಾವಣೆ ಕುರಿತು ಚರ್ಚೆ ನಡೆಸಿದ್ದೇವೆ. ಉಪ ಚುನಾವಣೆಯಲ್ಲಿ ಶಾಸಕ ಜನಾರ್ದನ ರೆಡ್ಡಿ, ಮಾಜಿ ಸಚಿವ ಬಿ. ಶ್ರೀರಾಮುಲು ಎಲ್ಲರೂ ಸೇರಿ ಎದುರಿಸುತ್ತಾರೆ ಎಂದರು.
Related Articles
ಕೊಟ್ಟೂರು: ಮುಡಾ ಹಗರಣದ ಎ-1 ಆರೋಪಿ ಸಿದ್ದರಾಮಯ್ಯ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಅನಂತರ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಅವರು ರಾಜೀನಾಮೆ ನೀಡುವುದನ್ನು ಯಾವುದೇ ಶಕ್ತಿ ತಡೆಯಲಾರದು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಶುಕ್ರವಾರ ಉಜ್ಜಿನಿ ಸದ್ಧರ್ಮ ಪೀಠಕ್ಕೆ ಆಗಮಿಸಿ ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರ ಜತೆ ಮಾತನಾಡಿ, ಮುಡಾ ಹಗರಣ ಸಿದ್ದರಾಮಯ್ಯರ ಮುಖವಾಡ ಬಯಲಿಗೆಳೆಯಲಿದೆ. ಚನ್ನಪಟ್ಟಣದಲ್ಲಿ ರಾಜಕೀಯ ಮೇಲಾಟ ನಡೆದಿದ್ದು, ಮೈತ್ರಿ ಅಭ್ಯರ್ಥಿ ಗೆಲುವಿನ ದಡ ತಲುಪಲಿದ್ದಾರೆ. ಯೋಗೇಶ್ವರ್ ಅವರನ್ನು ಕಾಂಗ್ರೆಸ್ ಹರಕೆಯ ಕುರಿ ಮಾಡಿದೆ ಎಂದರು.
Advertisement