Advertisement
ಜಿಲ್ಲೆಯ ಅರಕಲಗೂಡು ತಾಲೂಕಿನ ಬಿದರಕ್ಕ ಗ್ರಾಮದಲ್ಲಿ ಕೊಳಲು ಶ್ರೀಗೋಪಾಲಕೃಷ್ಣ ದೇವಸ್ಥಾನ ಉದ್ಘಾಟನಾ ಸಮಾರಂಭ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಇನ್ನು 2-3 ದಿನಗಳಲ್ಲಿ ಚುನಾವಣೆ ಆಯೋಗ ಉಪ ಚುನಾವಣೆಯ ವೇಳಾಪಟ್ಟಿ ಪ್ರಕಟಿಸಲಿದೆ. ಬಿಜೆಪಿ-ಜೆಡಿಎಸ್ ನಾಯಕರು ದೆಹಲಿಯಲ್ಲಿ ಚರ್ಚೆ ಮಾಡಿ ಅಭ್ಯರ್ಥಿ ಘೋಷಣೆ ಮಾಡ್ತೀವಿ. ಜೆಡಿಎಸ್ ಅಥವಾ ಬಿಜೆಪಿ ಅಭ್ಯರ್ಥಿ ಎಂಬ ಪ್ರಶ್ನೆಯಿಲ್ಲ. ಎನ್‌ಡಿಎ ಅಭ್ಯರ್ಥಿ ಚುನಾವಣಾ ಕಣದಲ್ಲಿರುತ್ತಾರೆ ಎಂದು ಸ್ಪಷ್ಟಪಡಿಸಿದರು.
ರಾಜ್ಯದ ಜನತೆ ಆಶೀರ್ವಾದ ಇದುವರೆಗೂ ನನ್ನನ್ನು ಏನು ಮಾಡಲು ಆಗಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ, ರಾಜ್ಯದ ಜನರ ಸಂಪೂರ್ಣ ಆಶೀರ್ವಾದ ಇದೆ ಎಂದು ಯಾರಾದರೂ ಬಂದು ತಥಾಸ್ತು ಅಂದಿದ್ದಾರಾ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಟಾಂಗ್ ನೀಡಿದರು.
Related Articles
Advertisement
ರಾಜ್ಯದ ಜನತೆ ಆಶೀರ್ವಾದಕ್ಕಿಂತ ಮುಖ್ಯವಾಗಿ ಒಂದು ರಾಜ್ಯದ ಮುಖ್ಯಮಂತ್ರಿಯಾಗಿ ಕೆಲವು ನಿರ್ಧಾರಗಳನ್ನು ಮಾಡುವಾಗ ಕಾನೂನು ಬಾಹಿರವಾದಂಥ ತೀರ್ಮಾನಗಳು, ಸರ್ಕಾರದ ಆಸ್ತಿಯನ್ನು ದುರ್ಬಳಕೆ ಮಾಡಿಕೊಳ್ಳುವುದು ಸಲ್ಲದು ಎಂದರು.
ಹಾಸನ ಜೆಡಿಎಸ್‌ನ ಭದ್ರಕೋಟೆ, ಅಲ್ಲಾಡಿಸಲಾಗದುಹಾಸನ ಜಿಲ್ಲೆ ಜೆಡಿಎಸ್ ಭದ್ರಕೋಟೆ. ಯಾರು ಏನೇ ಮಾಡಿದರೂ ಅದನ್ನು ಅಲ್ಲಾಡಿಸಲು ಆಗದು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಗುಡುಗಿದರು. ಹೊಳೆನರಸೀಪುರದಲ್ಲಿ ಮಾತನಾಡಿ, ಇಲ್ಲಿ ಜೆಡಿಎಸ್ ಅನ್ನು ಮತ್ತಷ್ಟು ಬಲಗೊಳಿಸಲು ಮುಂದಿನ ದಿನಗಳಲ್ಲಿ ಏನೇನು ಕ್ರಮ ಕೈಗೊಳ್ಳಬೇಕೋ ಅವನ್ನೆಲ್ಲ ತೆಗೆದುಕೊಂಡು ಪಕ್ಷ ಸಂಘಟನೆ ಮಾಡುತ್ತೇವೆ. ಹಾಸನ ಜಿಲ್ಲೆಯಲ್ಲಿ ಜೆಡಿಎಸ್ ಬೃಹತ್ ಸಮಾವೇಶ ನಡೆಸುವ ಬಗ್ಗೆಯೂ ಚಿಂತನೆ ನಡೆಸಿದ್ದೇವೆ ಎಂದು ತಿಳಿಸಿದರು. ರಾಷ್ಟ್ರೀಯ ಹೆದ್ದಾರಿ- 75ರ ಶಿರಾಡಿ ಘಾಟಿಯಲ್ಲಿ ರಸ್ತೆ ಪೂರ್ಣ ಹಾಳಾಗಿದ್ದು, ಕೇಂದ್ರದ ಸಾರಿಗೆ ಸಚಿವರ ಗಮನಕ್ಕೆ ತಂದಿದ್ದೇನೆ ಎಂದರು. ಅಧಿಕಾರವಿರುವಾಗ ಜಿಲ್ಲೆಗೆ ಏನಾದರೂ ಕೊಡುಗೆ ನೀಡಬೇಕೆಂಬ ತುಡಿತವಿದೆ. ಅದನ್ನು ಈಡೇರಿಸುವ ಪ್ರಯತ್ನ ಮಾಡುತ್ತೇನೆಂದು ಭರವಸೆ ನೀಡಿದರು.