Advertisement

By Poll: ಬಳ್ಳಾರಿಯಲ್ಲಿ ನಿಮ್ಮ ಅಟ್ಟಹಾಸ ಮುರಿದದ್ದು ಸಿದ್ದರಾಮಯ್ಯ ಅನ್ನೋದು ಮರೀಬೇಡಿ: ಸಿಎಂ

06:15 PM Nov 09, 2024 | Team Udayavani |

ಬಳ್ಳಾರಿ: ಶಾಸಕ ಜಿ.ಜನಾರ್ದನರೆಡ್ಡಿ ಒಬ್ಬ ಜುಜುಬಿ ರಾಜಕಾರಣಿ, ಎಷ್ಟು ವರ್ಷ ಜೈಲಿಗೆ ಹೋಗಿ ಬಂದಿದೀರಿ. ನಿಮ್ಮ ಅಟ್ಟಹಾಸ ಮುರಿದದ್ದು, ಬಳ್ಳಾರಿ ಜಿಲ್ಲೆಯ ಮಹಾ ಜನತೆಯ ಭಯಮುಕ್ತಗೊಳಿಸಿದ್ದು ಇದೇ ಸಿದ್ದರಾಮಯ್ಯ ಅನ್ನೋದು ಮರೀಬೇಡಿ ಎಂದು ಸಿಎಂ ಸಿದ್ದರಾಮಯ್ಯ ಶಾಸಕ ಜನಾರ್ದನರೆಡ್ಡಿಗೆ ಬಹಿರಂಗವಾಗಿಯೇ ನೇರಾ ನೇರ ಎಚ್ಚರಿಕೆ ನೀಡಿದರು.

Advertisement

ಜಿಲ್ಲೆಯ ಸಂಡೂರಿನ ವಿಠಲಾಪುರದಲ್ಲಿ ಶನಿವಾರ ನಡೆದ ಬಹಿರಂಗ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಪರ ಮತಯಾಚಿಸಿ ಮಾತನಾಡಿ
ಪ್ರಚಾರ ಸಭೆಯಲ್ಲಿ, ತಮ್ಮ ವಿರುದ್ಧ ಏಕವಚನದಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ ಜನಾರ್ದನರೆಡ್ಡಿ ವಿರುದ್ಧ ಹರಿಹಾಯ್ದು ಕೊಂಚ ಖಾರವಾಗಿಯೇ ರೆಡ್ಡಿಗೆ ಪ್ರತಿಕ್ರಿಯೆ ನೀಡಿದರು.

ರೆಡ್ಡಿಯವರೇ, ಕರ್ನಾಟಕ ರಾಜ್ಯ ರಾಜಕಾರಣಕ್ಕೆ ನನ್ನ ಕೊಡುಗೆ ಏನು ? ನಿಮ್ಮ ಕೊಡುಗೆ ಏನು? ನೀವೇನು ಬಳ್ಳಾರಿ ಯಜಮಾನರಾ? ಮತ ಹಾಕುವ ಬಳ್ಳಾರಿಯ ಜನ, ಸಂಡೂರಿನ ಜನ ನಮ್ಮ ಯಜಮಾನರು. ನೆನಪಿರಲಿ. ನಾನು ಗಂಗಾವತಿಗೆ ಪ್ರಚಾರಕ್ಕೆ ಹೋಗಲು ಆಗಲಿಲ್ಲ, ನಮ್ಮ ಕಾಂಗ್ರೆಸ್ ಅಭ್ಯರ್ಥಿ ಸರಿಯಾದ ಪ್ರಚಾರ ಮಾಡಲಿಲ್ಲ ಹೀಗಾಗಿ ನೀವು ಅಲ್ಲಿ ಗೆದ್ದಿದ್ದೀರಿ. ನಿಮ್ಮ ಈ ಗೆಲುವು ಶಾಶ್ವತ ಅಲ್ಲ. ಯಾರ ಗೆಲುವೂ ಶಾಶ್ವತ ಅಲ್ಲ. ನೆನಪಿರಲಿ. ನನ್ನ ಬಗ್ಗೆ ಏಕ ವಚನದಲ್ಲಿ ಮಾತನಾಡುವ ಯೋಗ್ಯತೆ ನಿಮಗಿಲ್ಲ ಎಂದು ಮತ್ತೊಮ್ಮೆ ಖಾರವಾಗಿಯೇ ಎಚ್ಚರಿಸಿದರು.

ನಾಚಿಕೆ ಆಗೋದಿಲ್ವಾ ನಿಮಗೆ: 
ಬಳ್ಳಾರಿಯಲ್ಲಿ ಪ್ರಜಾಪ್ರಭುತ್ವ ಇರಬಾರದಾ? ನಮ್ಮ ಸರ್ಕಾರ ಇದೆ. ಯಡಿಯೂರಪ್ಪ ಅವರು, ನೀವು ಮಾತನಾಡುತ್ತಿಲ್ಲವಾ ? ನಿಮ್ಮ ಸರ್ಕಾರ ಇದ್ದಾಗ ನನಗೆ ಬಳ್ಳಾರಿಯಲ್ಲಿ ಮಾತನಾಡಲು ಜಾಗ ಕೊಟ್ಟಿರಲಿಲ್ಲ. ನನಗೆ ಕುಡಿಯೋದಕ್ಕೆ ನೀರು ಕೇಳಿದ್ರೂ ಜನ ನೀರು ಕೊಡೋಕೂ ಭಯ ಪಡ್ತಾ ಇದ್ರು. ನಮ್ಮ ಯಜಮಾನರಾದ ಬಳ್ಳಾರಿ ಜನರನ್ನು ಇಷ್ಟು ಭಯದಲ್ಲಿ ಇಟ್ಟಿದ್ರಲ್ಲಾ , ಯಾವ ಮುಖ ಹೊತ್ತುಕೊಂಡು ಇದೇ ಜನರ ಬಳಿ ಮತ ಕೇಳಲು ಬಂದಿದ್ದೀರಿ? ನಾಚಿಕೆ ಆಗೋದಿಲ್ವಾ ನಿಮಗೆ ಎಂದು ಪ್ರಶ್ನಿಸಿದರು.

ಹಿಂದೆ ಜನಾರ್ದನರೆಡ್ಡಿಯವರ ಟೀಮು ನಡೆಸಿದ್ದ ಭ್ರಷ್ಟಾಚಾರವನ್ನು ಲೋಕಾಯುಕ್ತ ಸಂತೋಷ್ ಹೆಗ್ಡೆಯವರು ಬಯಲಿಗೆ ಎಳೆದಿದ್ದರು. ಇವರು ಅಧಿಕಾರಕ್ಕೆ ಬರೋದೇ ಲೂಟಿ ಮಾಡೋದಕ್ಕೆ. ಆದ್ದರಿಂದ ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಮ್ ರನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next