Advertisement

ಸೆಮೀಸ್‌ ಬಹಿರಂಗ ಪ್ರಚಾರಕ್ಕಿಂದು ತೆರೆ

06:00 AM Nov 01, 2018 | |

ಬೆಂಗಳೂರು: ರಾಜ್ಯದಲ್ಲಿ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಉಪ ಚುನಾವಣೆಗೆ ಶನಿವಾರ ಮತದಾನ ನಡೆಯಲಿದ್ದು, ಗುರುವಾರ ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಹಾಗಾಗಿ ಮೂರು ಪಕ್ಷಗಳ ನಾಯಕರು ಗುರುವಾರ ಸಂಜೆವರೆಗೆ ಬಿರುಸಿನ ಪ್ರಚಾರ ನಡೆಸಲು ಸಜ್ಜಾಗಿದ್ದಾರೆ. ಗುರುವಾರ ಸಂಜೆ 5 ಗಂಟೆ ಹೊತ್ತಿಗೆ ಕ್ಷೇತ್ರದ ಮತದಾರರಲ್ಲದವರು ಕ್ಷೇತ್ರದಿಂದ ಹೊರ ಹೋಗಲಿದ್ದಾರೆ. ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ಜೆ.ಶಾಂತಾ, ಮೈತ್ರಿ ಸರ್ಕಾರದ ಅಭ್ಯರ್ಥಿಯಾಗಿ ಕಾಂಗ್ರೆಸ್‌ನ ವಿ.ಎಸ್‌. ಉಗ್ರಪ್ಪ, ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ.ವೈ. ರಾಘವೇಂದ್ರ ಹಾಗೂ ಮೈತ್ರಿ ಸರ್ಕಾರದ ಅಭ್ಯರ್ಥಿಯಾಗಿ ಜೆಡಿಎಸ್‌ನ ಮಧು ಬಂಗಾರಪ್ಪ, ಜೆಡಿಯುನಿಂದ ಮಹಿಮಾ ಪಟೇಲ್‌ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮೈತ್ರಿ ಸರ್ಕಾರದ ಅಭ್ಯರ್ಥಿಯಾಗಿ ಜೆಡಿಎಸ್‌ನ ಎಲ್‌.ಆರ್‌.ಶಿವರಾಮೇಗೌಡ, ಬಿಜೆಪಿಯಿಂದ ಸಿದ್ದರಾಮಯ್ಯ ಕಣದಲ್ಲಿದ್ದಾರೆ.

Advertisement

ರಾಮನಗರ ವಿಧಾನಸಭೆ ಕ್ಷೇತ್ರದಲ್ಲಿ ಮೈತ್ರಿ ಸರ್ಕಾರದ ಅಭ್ಯರ್ಥಿಯಾಗಿ ಜೆಡಿಎಸ್‌ನ ಅನಿತಾ ಕುಮಾರಸ್ವಾಮಿ, ಬಿಜೆಪಿಯಿಂದ ಚಂದ್ರಶೇಖರ್‌ ಸ್ಪರ್ಧಿಸಿದ್ದಾರೆ. ಜಮಖಂಡಿ ಕ್ಷೇತ್ರದಲ್ಲಿ ಮೈತ್ರಿ ಸರ್ಕಾರದ ಅಭ್ಯರ್ಥಿಯಾಗಿ ಕಾಂಗ್ರೆಸ್‌ನ ಅನಂದ್‌ ನ್ಯಾಮಗೌಡ, ಬಿಜೆಪಿಯಿಂದ ಶ್ರೀಕಾಂತ್‌ ಕುಲಕರ್ಣಿ ಕಣದಲ್ಲಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ರಾಜ್ಯ ಮುಖ್ಯ  ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌, ಮೂರು ಲೋಕಸಭೆ ಮತ್ತು ಎರಡು ವಿಧಾನಸಭೆ ಉಪ ಚುನಾವಣೆಗೆ ಶನಿವಾರ ಮತದಾನ ನಡೆಯಲಿರುವ
ಹಿನ್ನೆಲೆಯಲ್ಲಿ 1,502 ಸೂಕ್ಷ್ಮ ಮತ್ತು 57 ಸಖೀ (ಪಿಂಕ್‌) ಮತಗಟ್ಟೆ ಸಹಿತವಾಗಿ ಐದು ಕ್ಷೇತ್ರದಲ್ಲಿ 6,453 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ಹೇಳಿದರು.

ಭದ್ರತೆಗಾಗಿ ಸ್ಥಳೀಯ ಪೊಲೀಸರು ಹಾಗೂ 39 ಕೇಂದ್ರ ಮೀಸಲು ಪಡೆ ನಿಯೋಜಿಸಲಾಗಿದೆ. 9,822 ಬ್ಯಾಲೆಟ್‌ ಯೂನಿಟ್‌, 8,438 ಕಂಟ್ರೋಲ್‌ ಯೂನಿಟ್‌ ಹಾಗೂ 8,922 ವಿವಿ ಪ್ಯಾಟ್‌ಗಳನ್ನು ಬಳಕೆ ಮಾಡಲಾಗುತ್ತಿದೆ. 26 ಮತಗಟ್ಟೆಗಳನ್ನು ವಿಕಲಚೇತನರ ಸಿಬ್ಬಂದಿಯೇ ನಿರ್ವಹಣೆ ಮಾಡಲಿದ್ದಾರೆ. 130 ಮತಗಟ್ಟೆಗಳಲ್ಲಿ ವೆಬ್‌ ಕಾಸ್ಟಿಂಗ್‌ ಮಾಡಲಾಗುವುದು. 1,312 ಮೈಕ್ರೋ
ವೀಕ್ಷಕರನ್ನು ನೇಮಿಸಲಾಗಿದೆ ಎಂದು ತಿಳಿಸಿದರು.

ಐದು ಕ್ಷೇತ್ರದಲ್ಲಿ 54,54,275 ಮತದಾರರಿದ್ದು, 27,21,085 ಪುರುಷ ಹಾಗೂ 27,30,949 ಮಹಿಳಾ ಮತದಾರರು, 462 ಇತರರು ಮತ್ತು 1879 ಸೇವಾ ಮತದಾರರಿದ್ದಾರೆ. ಸೇವಾ ಮತದಾರರಿಗೆ ಇಟಿಪಿಬಿಎಸ್‌ ಸೌಲಭ್ಯ ಮೂಲಕ ಮತದಾನ ಮಾಡಲು ಅ.21ರಂದು ತಂತ್ರಾಂಶದ ಮೂಲಕ ಕಳುಹಿಸಲಾಗಿದೆ. 51,131 ದಿವ್ಯಾಂಗ ಮತದಾರರನ್ನು ಗುರುತಿಸಿದ್ದು, ಅವರನ್ನು
ಮನೆಯಿಂದ ಮತಗಟ್ಟೆಗೆ ಕರೆದೊಯ್ಯುವ ಹಾಗೂ ವಾಪಸ್‌ ಮನೆಗೆ ಬಿಡಲು ಇದೇ ಮೊದಲ ಬಾರಿಗೆ ವಾಹನ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಆರಕ್ಕೆ ಎಣಿಕೆ
ಬಳ್ಳಾರಿ ಲೋಕಸಭಾ ಕ್ಷೇತ್ರದ ಮತ ಎಣಿಕೆ ರಾವ್‌ ಬಹದ್ದೂರ್‌ ವೈ. ಮಹಾಬಲೇಶ್ವರಪ್ಪ ಇಂಜಿನಿ ಯರ್‌ ಕಾಲೇಜು, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಸಹ್ಯಾದ್ರಿ ಕಲಾ ಕಾಲೇಜು, ಮಂಡ್ಯ ಲೋಕಸ ಭಾ ಕ್ಷೇತ್ರದ ಮತ ಎಣಿಕೆ ಸರ್ಕಾರಿ ಕಾಲೇಜು,
ಜಮಖಂಡಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಮಿನಿ ವಿಧಾನಸೌಧ, ರಾಮನಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನ. 6ರಂದು ನಡೆಯಲಿದೆ.

Advertisement

ಅಕ್ರಮವಾಗಿ ಸಾಗಿಸುತ್ತಿದ್ದ 60,508 ಲೀಟರ್‌ ಮದ್ಯ, 54.80 ಲಕ್ಷ ನಗದು ಜಪ್ತಿ ಮಾಡಲಾಗಿದೆ. ಮತದಾನದ ದಿನ 24 ಗಂಟೆ ಹಾಗೂ ಮತ ಎಣಿಕೆ (ನ.6)ದಿನ ಮದ್ಯ ಮಾರಾಟಕ್ಕೆ ನಿಷೇಧ.
ಸಂಜೀವ್‌ ಕುಮಾರ್‌, ರಾಜ್ಯ ಮುಖ್ಯ ಚುನಾವಣಾಧಿಕಾರಿ

Advertisement

Udayavani is now on Telegram. Click here to join our channel and stay updated with the latest news.

Next