Advertisement
ಸೋಮವಾರ ಜಿಲ್ಲೆಯ ಬಸವನಬಾಗೇವಾಡಿ ಕ್ಷೇತ್ರದ ಕೊಲ್ಹಾರದಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಕೆ.ಬೆಳ್ಳುಬ್ಬಿ ಪರ ಚುನಾವಣಾ ಪ್ರಚಾರದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಒಂದೆಡೆ ರಾಹುಲ್ ಗಾಂಧಿ ಅವರು ಕರ್ನಾಟಕಕ್ಕೆ ಬಂದು ಬಸವ ತತ್ವದ ಮಾತನಾಡುತ್ತಾರೆ. ಮತ್ತೊಂದೆಡೆ ಅವರದೇ ಪಕ್ಷದ ವಿಧಾನಸಭೇ ವಿಪಕ್ಷ ನಾಯಕ ಸಿದ್ರಾಮಯ್ಯ ಅವರು ಲಿಂಗಾಯತ ಮುಖಂಡರ ಬಗ್ಗೆ ಕೆಟ್ಟದಾಗಿ ಮಾತಾಡ್ತಾರೆ. ಇದು ಕಾಂಗ್ರೆಸ್ ನಾಯಕರ ದ್ವಂದ್ವ ನೀತಿ ಹಾಗೂ ರಾಜಕೀಯ ಎಂದು ವ್ಯಂಗ್ಯವಾಡಿದರು.
Related Articles
Advertisement
ರಾಜ್ಯದ ಬಿಜೆಪಿ ವರಿಷ್ಠ ನಾಯಕ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಸರ್ವ ಸಮಾಜಗಳನ್ನ ಸಮಾನವಾಗಿ ಕಂಡಿದ್ದಾರೆ. ಅಧಿಕಾರದಿಂದ ಕೆಳಗಿಳಿದರೂ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ಪಕ್ಷ ಸಂಘಟನೆಗೆ ತಮ್ಮನ್ನು ಸಮರ್ಪಿಸಿಕೊಂಡಿದ್ದಾರೆ. ಈ ಬಾರಿ ಯಡಿಯೂರಪ್ಪ ಅವರ ಕೈ ಬಲಪಡಿಸಿಂತೆ ರಾಜ್ಯದ ಜನರು ಮತ್ತೊಮ್ಮೆ ಬಿಜೆಪಿ ಪಕ್ಷಕ್ಕೆ ಅವಕಾಶ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವಿಜಯೇಂದ್ರ ರೋಡ್ ಶೋ: ಇದಕ್ಕೂ ಮುನ್ನ ಬಸವನಬಾಗೇವಾಡಿ ಕ್ಷೇತ್ರದ ಕೊಲ್ಹಾರ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಪರ ರೋಡ್ ಶೋ ನಡೆಸಿದ ಬಿ.ವೈ.ವಿಜಯೇಂದ್ರ ಅವರಿಗೆ ಪುಷ್ಪ ಮಳೆಯ ಮೂಲಕ ಅದ್ದೂರಿಯಾಗಿ ಸ್ವಾಗತ ನೀಡಲಾಯಿತು.
ಕೊಲ್ಹಾರ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದ ರೋಡ್ ಶೋದಲ್ಲಿ ಎಸ್.ಕೆ.ಬೆಳ್ಳುಬ್ಬಿ ಅವರಿಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತ್ರವಲ್ಲದೇ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಸೇರಿದಂತೆ ಇನ್ನಿತರ ಸ್ಥಳೀಯ ಮುಖಂಡರು ಸಾಥ್ ನೀಡಿದರು. ತೆರೆದ ವಾಹನದಲ್ಲಿ ಮುಖಂಡರೆಲ್ಲ ಸಾಗಿದರೆ, ರೋಡ್ ಶೋದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಸೇರಿದಂತೆ ಕಾರ್ಯಕರ್ತರು ಪಾಲ್ಗೊಂಡು ಬಿಜೆಪಿ ಪರ ಘೋಷಣೆ ಕೂಗಿದರು.
ಜೆಸಿಪಿ ಮೂಲಕ ರೋಡ್ ಶೋ ಉದ್ದಕ್ಕೂ ಅಲ್ಲಲ್ಲಿ ಹೂ ಮಳೆ ಸುರಿಸುವ ಮೂಲಕ ಸ್ವಾಗತಿಸಲಾಯಿತು. ಇದೇ ವೇಳೆ ಕ್ಷೇತ್ರದ ಜೆಡಿಎಸ್ ಟಿಕೆಟ್ ಘೋಷಿತರಾಗಿ ಬಳಿಕ ಟಿಕೆಟ್ ತಪ್ಪಿದ್ದರಿಂದ ಪರಮಾನಂದ ತನಿಖೆದಾರ ಬಿಜೆಪಿ ಸೇರ್ಪಡೆಯಾಗಿ, ಬಿಜೆಪಿ ಅಭ್ಯರ್ಥಿ ಎಸ್.ಕೆ.ಬೆಳ್ಳುಬ್ಬಿ ಅವರಿಗೆ ಬೆಂಬಲ ಸೂಚಿಸಿದರು.
ಇದನ್ನೂ ಓದಿ: Udupi; ಉಡುಪಿಯಲ್ಲಿ ಪ್ರಸಾದ್ ರಾಜ್ ಕಾಂಚನ್ ಪರ ಡಿಕೆ ಶಿವಕುಮಾರ್ ಭರ್ಜರಿ ರೋಡ್ ಶೋ