Advertisement

ಅನಧಿಕೃತ ಮಾಂಸ ಮಾರಾಟ ಮಳಿಗೆ ತೆರವುಗೊಳಿಸಿ

06:06 PM Feb 07, 2021 | Team Udayavani |

ಬ್ಯಾಡಗಿ: ಪಟ್ಟಣದ ಬೀದಿ ಬದಿಗಳಲ್ಲಿ ಅನಧಿಕೃತ ಮಾಂಸ ಮಾರಾಟ ಮಳಿಗೆಗಳು ತಲೆ ಎತ್ತಿವೆ. ಇದರಿಂದ ಹೊರಸೂಸುವ ದುರ್ವಾಸನೆಯಿಂದ ಸಾರ್ವಜನಿಕರಿಗೆ ಬಹಳಷ್ಟು ತೊಂದರೆಯಾಗುತ್ತಿದೆ. ಕೂಡಲೇ ಅವುಗಳನ್ನು ತೆರವುಗೊಳಿಸುವಂತೆ ಭ್ರಷ್ಟಾಚಾರ ವಿರೋಧಿ ಜನಾಂದೋಲನ ನ್ಯಾಸ ಘಟಕದ ಸಂಚಾಲಕ ಮಲ್ಲೇಶಪ್ಪ ಚಿಕ್ಕಣ್ಣನವರ ಆಗ್ರಹಿಸಿದ್ದಾರೆ.

Advertisement

ಹಾವೇರಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಿಗೆ ಹಾಗೂ ಜಿಲ್ಲಾ  ಆರೋಗ್ಯಾಧಿಕಾರಿಗಳಿಗೆ ಲಿಖೀತ ರೂಪದಲ್ಲಿ ಮನವಿ ಸಲ್ಲಿಸಿ ಮಾತನಾಡಿದ ಅವರು, ಸಾರ್ವಜನಿಕ ಸ್ಥಳದಲ್ಲಿ ಪಟ್ಟಣದ ವ್ಯಾಪ್ತಿಯಲ್ಲಿ ಪರವಾನಗಿ ಇಲ್ಲದೇ ಬೀದಿ ಬದಿಗಳಲ್ಲಿ ಎಲ್ಲೆಂದರಲ್ಲಿ ಕುರಿ ಮತ್ತು ಕೋಳಿ ಮಾಂಸದ ಮಾರಾಟ ಮಾಡಲು ಅವಕಾಶವಿಲ್ಲ. ಬೀದಿಬದಿಗಳಲ್ಲಿ ಕುರಿ ಮತ್ತು ಕೋಳಿ ಮಾಂಸದ ಮಾರಾಟ ಮಾಡುವುದರಿಂದ ಹಂದಿ, ನಾಯಿ ಕಾಟವೂ ಹೆಚ್ಚಿದ್ದು, ಇದರಿಂದ ಸಾರ್ವಜನಿಕರಿಗೆ ಬಹಳಷ್ಟು ತೊಂದರೆ ಆಗಬಾರದೆಂಬ ಉದ್ದೇಶದಿಂದ ಸ್ವತ್ಛತೆ ಕಾಪಾಡಿಕೊಂಡು ಒಂದು ನಿರ್ದಿಷ್ಟ ಸ್ಥಳದಲ್ಲಿ ಮಾಂಸ ಮಾರಾಟ ಮಾಡುವಂತೆ ಮಾಂಸ ಮಾರಾಟಗಾರರಿಗೆ ಬಗ್ಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳನ್ನು ಆಗ್ರಹಿಸಿದ್ದಾರೆ.

 ಇದನ್ನೂ ಓದಿ :ಕೃಷಿ ಮಸೂದೆ ವಾಪಸ್‌ಗೆ ಹೆದ್ದಾರಿ ತಡೆ

ಹಲವಾರು ತಿಂಗಳುಗಳಿಂದ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಬೀದಿಬದಿಯಲ್ಲಿ ಕುರಿ ಮತ್ತು ಕೋಳಿ ಮಾಂಸದ ಮಾರಾಟಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್‌, ಮುಖ್ಯಾಧಿಕಾರಿ ಮತ್ತು ತಾಲೂಕಿನ ಆರೋಗ್ಯಾಧಿಕಾರಿಗಳು ಸೇರಿದಂತೆ ಇತರ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next