Advertisement

ಉಪ ಸಮರ; ನಂಜನಗೂಡು, ಗುಂಡ್ಲುಪೇಟೆ “ಕೈ”ವಶ, BSYಗೆ ಮುಖಭಂಗ

11:51 AM Apr 13, 2017 | Sharanya Alva |

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ ಪ್ರತಿಷ್ಠೆಯ ಕಣವಾಗಿದ್ದು, ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ.

Advertisement

ನಂಜನಗೂಡು ಕ್ಷೇತ್ರದಲ್ಲಿ ಬಿಜೆಪಿಯ ಶ್ರೀನಿವಾಸ ಪ್ರಸಾದ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವಮೂರ್ತಿ(63,486 ಮತ) ಅವರು 17, 560 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಗುಂಡ್ಲುಪೇಟೆ ಕ್ಷೇತ್ರದಲ್ಲಿ ಬಿಜೆಪಿಯ ನಿರಂಜನ್ ಕುಮಾರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಗೀತಾ ಮಹದೇವಪ್ರಸಾದ್ ಅವರು 12,077 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಬಿಎಸ್ ವೈ, ಶ್ರೀನಿವಾಸ್ ಪ್ರಸಾದ್ ಮುಖಭಂಗ:
ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನಂಜನಗೂಡು, ಗುಂಡ್ಲುಪೇಟೆಯಲ್ಲಿ ಭರ್ಜರಿ ಪ್ರಚಾರ ನಡೆಸಿದ್ದರು. ಅಲ್ಲದೇ ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿತ್ತು. ಈ ಹಿನ್ನೆಲೆಯಲ್ಲಿ 2 ಕ್ಷೇತ್ರದಲ್ಲಿಯೂ ಬಿಜೆಪಿ ಸೋತಿರುವುದು ಯಡಿಯೂರಪ್ಪಗೆ ಹಿನ್ನಡೆಯಾದಂತಾಗಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಸೆಡ್ಡು ಹೊಡೆದು ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದ ಶ್ರೀನಿವಾಸ್ ಪ್ರಸಾದ್ ನಂಜನಗೂಡು ಕ್ಷೇತ್ರದಲ್ಲಿ ಸೋಲುವ ಮೂಲಕ ಮುಖಭಂಗ ಅನುಭವಿಸಿದ್ದಾರೆ.

ನಂಜನಗೂಡು ಕ್ಷೇತ್ರ:
ಕಳಲೆ ಕೇಶವಮೂರ್ತಿ(ಕಾಂಗ್ರೆಸ್) 77, 568 ಮತ
ಶ್ರೀನಿವಾಸ್ ಪ್ರಸಾದ್(ಬಿಜೆಪಿ)  58, 144
ಗೆಲುವಿನ ಅಂತರ: 19, 228

Advertisement

ಗುಂಡ್ಲುಪೇಟೆ ಕ್ಷೇತ್ರ:
ಗೀತಾ ಮಹದೇವಪ್ರಸಾದ್(ಕಾಂಗ್ರೆಸ್) 90, 258
ನಿರಂಜನ್ ಕುಮಾರ್ (ಬಿಜೆಪಿ) 79, 381
ಗೆಲುವಿನ ಅಂತರ: 10,877

Advertisement

Udayavani is now on Telegram. Click here to join our channel and stay updated with the latest news.

Next