ಬೆಂಗಳೂರು: ರಾಜ್ಯದ ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದೆ. ನವೆಂಬರ್ 3ರಂದು ಚುನಾವಣೆ ನಡೆದರೆ, ಅದೇ ತಿಂಗಳ 10ರಂದು ಮತ ಎಣಿಕೆ ನಡೆಯಲಿದೆ.
ನಾಮಪತ್ರ ಸಲ್ಲಿಸಲು ಅಕ್ಟೋಬರ್ 16ರಂದು ಕಡೆಯ ದಿನಾಂಕವಾಗಿದ್ದು, ಅಕ್ಟೋಬರ್ 19ರಂದು ನಾಮಪತ್ರ ವಾಪಾಸ್ ಪಡೆಯಲು ಕೊನೆಯ ದಿನಾಂಕವಾಗಿದೆ. ನವೆಂಬರ್ 3ರಂದು ಚುನಾವಣೆ ನಡೆದರೆ, ನವೆಂಬರ್ 10ರಂದು ಮತ ಎಣಿಕೆ ನಡೆಯಲಿದೆ
ಬಿಹಾರ ವಿಧಾನಸಭೆ ಚುನಾವಣೆಯೊಂದಿಗೆ ಈ ಉಪಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ತೀರ್ಮಾನಿಸಿದೆ.
ಇದನ್ನೂ ಓದಿ:ಅಧಿಕಾರ ಇಲ್ಲದಿದ್ದಾಗ ಬೆಂಕಿ ಹಾಕೋದು; ಇದ್ದಾಗ ಭ್ರಷ್ಟಾಚಾರ ಮಾಡೋದು ‘ಕೈ’ ಕೆಲಸ: ಕಟೀಲ್ ಕಿಡಿ
ರಾಜರಾಜೇಶ್ವರಿ ನಗರ ಶಾಸಕರಾಗಿದ್ದ ಮುನಿರತ್ನ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದಾಗ ಸ್ಥಾನ ತೆರವಾಗಿತ್ತು. ಇಲ್ಲಿ ಬಿಜೆಪಿಯಿಂದ ಮುನಿರತ್ನ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.
ಶಿರಾ ಕ್ಷೇತ್ರದ ಶಾಸಕರಾಗಿದ್ದ ಸತ್ಯನಾರಾಯಣ ಅವರು ಇತ್ತೀಚೆಗೆ ನಿಧನ ಹೊಂದಿದ್ದರು. ಹೀಗಾಗಿ ಈ ಕ್ಷೇತ್ರಕ್ಕೆ ಉಪಚುನಾವಣೆ ನಿಗದಿಯಾಗಿದೆ.