ಬೈಂದೂರು: ಮೊಗವೀರ ಯುವ ಸಂಘಟನೆ (ರಿ.)ಉಡುಪಿ ಜಿಲ್ಲೆ, ಬೈಂದೂರು ಶಿರೂರು ಘಟಕ, ಜಿ. ಶಂಕರ ಫ್ಯಾಮಿಲಿ ಟ್ರಸ್ಟ್ (ರಿ.)ಅಂಬಲಪಾಡಿ ಉಡುಪಿ, ರಕ್ತನಿಧಿ ಕೆ.ಎಂ.ಸಿ. ಆಸ್ಪತ್ರೆ ಮಣಿಪಾಲ, ಉಡುಪಿ ಜಿಲ್ಲಾ ಆಸ್ಪತ್ರೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ ಬೈಂದೂರು ಅಂಬೇಡ್ಕರ್ ಭವನದಲ್ಲಿ ನಡೆಯಿತು.
ನಿವೃತ್ತ ಸಿಂಡಿಕೇಟ್ ಬ್ಯಾಂಕ್ ಅಧಿಕಾರಿ ಜಗನ್ನಾಥ ಕೆ.ಬೈಂದೂರು ರಕ್ತದಾನ ಶಿಬಿರವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಸ್ವ-ಪ್ರೇರಣೆಯಿಂದ ರಕ್ತದಾನ ಮಾಡುವುದರಿಂದ ಜೀವನ್ಮರಣ ಹೋರಾಟದಲ್ಲಿರುವವರ ಪ್ರಾಣ ಉಳಿಸಿದ ಪುಣ್ಯ ಪ್ರಾಪ್ತವಾಗುತ್ತದೆ.ರಕ್ತದಾನಕ್ಕೆ ವಿಶೇಷವಾದ ಪ್ರಾಮುಖ್ಯವಿದೆ. ಇನ್ನೊಬ್ಬರ ಜೀವನವನ್ನು ಉಳಿಸಿದ ತೃಪ್ತಿ ದೊರೆಯುತ್ತದೆ ಹಾಗೂ ಗ್ರಾಮೀಣ ಭಾಗದಲ್ಲಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸು ವುದರಿಂದ ಜನ ಸಾಮಾನ್ಯರಿಗೆ ಮಾಹಿತಿ ಹಾಗೂ ರಕ್ತದಾನದ ಅರಿವು ಮೂಡುತ್ತದೆ. ಸಂಘ ಸಂಸ್ಥೆಗಳು ಸಾಮಾಜಿಕ ಕಾಳಜಿ ಹೊಂದಿದಾಗ ಮನ್ನಣೆ ದೊರೆಯುತ್ತದೆ ಎಂದರು.
ಬೈಂದೂರು-ಶಿರೂರು ಘಟಕದ ಅಧ್ಯಕ್ಷ ಗಂಗಾಧರ ಮೊಗವೀರ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಮೊಗವೀರ ಯುವ ಸಂಘಟನೆ ಜಿಲ್ಲಾಧ್ಯಕ್ಷ ಗಣೇಶ್ ಕಾಂಚನ್, ಕೆ.ಎಂ.ಸಿ. ಆಸ್ಪತ್ರೆಯ ವೈದ್ಯಾಧಿಕಾರಿ ಗಣೇಶ ಮೋಹನ್, ಬೈಂದೂರು ಗಾಣಿಗ ಸಂಘದ ಅಧ್ಯಕ್ಷ ಗೋಪಾಲ ಗಾಣಿಗ, ರಾಮ ಮೊಗೇರ್ ಬೈಂದೂರು, ಅಂಬೇಡ್ಕರ್ ಯುವಕ ಸಂಘದ ಅಧ್ಯಕ್ಷ ಲಕ್ಷ್ಮಣ ಯಡ್ತರೆ, ಮಾರಿಕಾಂಬಾ ಯೂತ್ ಕ್ಲಬ್ ಅಧ್ಯಕ್ಷ ಪ್ರದೀಪ ಶೆಟ್ಟಿ, ಉಪ್ಪುಂದ ಜೇಸಿಐ ಕಾರ್ಯದರ್ಶಿ ಪ್ರಶಾಂತ ಪೂಜಾರಿ, ಯೋಗೇಶ್ ಶಿರೂರು, ನಾಗರಾಜ ಚಂದನ್ ಉಪಸ್ಥಿತರಿದ್ದರು.
ಕ್ರೀಡಾ ಕಾರ್ಯದರ್ಶಿ ಕೃಷ್ಣ ಮೊಗೇರ್ ಸ್ವಾಗತಿಸಿದರು. ಶಿಕ್ಷಕ ಪಾಂಡುರಂಗ ಅಳ್ವೆಗದ್ದೆ ಕಾರ್ಯಕ್ರಮ ನಿರ್ವಹಿಸಿದರು. ಪ್ರಧಾನ ಕಾರ್ಯದರ್ಶಿ ವಸಂತ ಬಿ. ತಗ್ಗರ್ಸೆ ವಂದಿಸಿದರು.