Advertisement
ನೂತನ ತಾಲೂಕು ಆದ ಬಳಿಕ ಲೋಕಸಭಾ ಚುನಾವಣೆಗಾಗಿ ಮಸ್ಟರಿಂಗ್ ಬೈಂದೂರಿನಲ್ಲಿ ನಡೆಯುತ್ತಿರುವುದು ಇದು ಎರಡನೇ ಬಾರಿ. ಕಳೆದ ನವೆಂಬರ್‌ನಲ್ಲಿ ಶಿವಮೊಗ್ಗ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಮೊದಲ ಬಾರಿಗೆ ಮಸ್ಟರಿಂಗ್ ಕಾರ್ಯ ಮಾಡಲಾಗಿತ್ತು. ಸಹಾಯಕ ಚುನಾವಣಾಧಿಕಾರಿ ಕುಸುಮಾಧರ ಅವರ ನೇತೃತ್ವದಲ್ಲಿ ತಹಶೀಲ್ದಾರ್ ಬಸಪ್ಪ ಪೂಜಾರ್ ಮತ್ತು ಸಿಬಂದಿ ಸಹಕಾರದೊಂದಿಗೆ ಸಿದ್ಧತೆಗಳು ನಡೆದವು.
ಕ್ಷೇತ್ರದಲ್ಲಿ ಬೈಂದೂರು ತಾಲೂಕಿನ 26, ಕುಂದಾಪುರದ 39 ಸೇರಿ 65 ಗ್ರಾಮಗಳು ಇವೆ. 1,10,237 ಪುರುಷ, 1,16,349 ಮಹಿಳಾ ಮತ್ತು 1 ಅನ್ಯ ಸೇರಿ ಒಟ್ಟು 2,26,587 ಮತದಾರರು 246 ಮತದಾನ ಕೇಂದ್ರಗಳಲ್ಲಿ ಹಕ್ಕು ಚಲಾಯಿಸಲಿದ್ದಾರೆ. ಹೆಮ್ಮಾಡಿಯಲ್ಲಿ 2 ಮತ್ತು ತಲ್ಲೂರಿನಲ್ಲಿ 3 ಸಖೀ ಮತಗಟ್ಟೆಗಳಿರುತ್ತವೆ. ಎಲ್ಲ ಕೇಂದ್ರಗಳಲ್ಲೂ ವಿಶೇಷ ಚೇತನರಿಗೆ, ಅಶಕ್ತರಿಗೆ, ಗರ್ಭಿಣಿಯರಿಗೆ ಮತ್ತು ಹಿರಿಯ ನಾಗರಿಕರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. 1088 ಮತಗಟ್ಟೆ ಸಿಬ್ಬಂದಿ ಮತ್ತು 246 ಸಹಾಯಕ ಸಿಬಂದಿ ಚುನಾವಣೆಯ ಕರ್ತವ್ಯ ನಿರ್ವಹಿಸುವರು. ಎ. 22ರ ಬೆಳಗ್ಗೆ ಬೈಂದೂರು ಸರಕಾರಿ ಪ.ಪೂ. ಕಾಲೇಜಿನ ಮಸ್ಟರಿಂಗ್ ಕೇಂದ್ರಕ್ಕೆ ಬರಲು 41 ಬಸ್ ಮತ್ತು 45 ವ್ಯಾನ್‌ಗಳ ವ್ಯವಸ್ಥೆ ಮಾಡಲಾಗಿತ್ತು. ಮತದಾನ ಮುಗಿದ ಬಳಿಕ ಡಿಮಸ್ಟರಿಂಗ್ ಕೂಡ ಇಲ್ಲಿಯೇ ನಡೆದು, ಮತಪೆಟ್ಟಿಗೆಗೆಳನ್ನು ಅದೆ ರಾತ್ರಿ ಶಿವಮೊಗ್ಗಕ್ಕೆ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ. ಎಲ್ಲ ವ್ಯವಸ್ಥೆ
ಚುನಾವಣೆಗಾಗಿ ಕ್ಷೇತ್ರ ಬಹತೇಕವಾಗಿ ಸಿದ್ದಗೊಂಡಿದೆ. ಸುಮಾರು ಎರಡುವರೆ ಸಾವಿರ ಜನರಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಎಲ್ಲಾ ಮತಗಟ್ಟೆಗಳಲ್ಲೂ ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ ಸೇರಿದಂತೆ ಎಲ್ಲ ಸಿದ್ದತೆ ಪೂರ್ಣಗೊಂಡಿದೆ. ಚುನಾವಣಾ ಕರ್ತವ್ಯಕ್ಕೆ ಹಾಜರಾದ ಸಿಬಂದಿ ಕೂಡ ಇಲಾಖೆಯ ಪರಿಪೂರ್ಣ ವ್ಯವಸ್ಥೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇಪ್ಪತ್ತು ಕೊಠಡಿಗಳಲ್ಲಿ ಇಪ್ಪತ್ತು ಸೆಕ್ಟರ್‌ಗಳಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.
Related Articles
Advertisement