ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆಯ ಜತೆಗೆ ದೇಶದ 11 ರಾಜ್ಯಗಳಲ್ಲಿನ 58 ಕ್ಷೇತ್ರಗಳಿಗೆ ನಡೆದಿದ್ದ ಉಪಚುನಾವಣೆಯ ಫಲಿತಾಂಶದಲ್ಲಿ 24 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, 16 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಕರ್ನಾಟಕದ ಶಿರಾ ಮತ್ತು ರಾಜರಾಜೇಶ್ವರಿ ನಗರದಲ್ಲಿ ನಡೆದ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ಭಾರತೀಯ ಜನತಾ ಪಕ್ಷ ಎರಡೂ ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಗೆಲುವಿನ ನಗು ಬೀರಿದೆ.
ಮಧ್ಯಪ್ರದೇಶದಲ್ಲಿಯೂ 28 ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿದ್ದು, 14 ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಕ್ಷ ಗೆಲುವು ಸಾಧಿಸಿದ್ದು, ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಾಗೂ ಒಂದು ಕ್ಷೇತ್ರದಲ್ಲಿ ಬಿಎಸ್ಪಿ ಪಕ್ಷ ಮುನ್ನಡೆ ಸಾಧಿಸಿದೆ.
ಉತ್ತರಪ್ರದೇಶದಲ್ಲಿ ನಡೆದ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಆರು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಸಮಾಜವಾದಿ ಪಕ್ಷ ಒಂದು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಇದನ್ನೂ ಓದಿ:ಬಿಹಾರ ಚುನಾವಣಾ ಫಲಿತಾಂಶ:ಎನ್ ಡಿಎಗೆ ಮುನ್ನಡೆ, ಈ ಬಾರಿ 20 ಕ್ಷೇತ್ರದಲ್ಲಿ ಎಡಪಕ್ಷ ಮುನ್ನಡೆ
ಗುಜರಾತ್ ನಲ್ಲಿ ಎಂಟು ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಐದು ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಕ್ಷ ಮುನ್ನಡೆ ಸಾಧಿಸಿದೆ ಎಂದು ಆಯೋಗ ತಿಳಿಸಿದೆ.