ಬೆಂಗಳೂರು: ಬಿಬಿಎಂಪಿ ಚುನಾವಣೆ ನಡೆಸಲು ನಮ್ಮದೇನು ಅಭ್ಯಂತರ ಇಲ್ಲ. ಚುನಾವಣೆ ಯಾವಾಗ ನಡೆದರೂ ಬಿಜೆಪಿ ಪಕ್ಷ ಸಿದ್ಧವಿದೆ ಎಂದು ಸಚಿವ ಬೈರತಿ ಬಸವರಾಜ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿಯಲ್ಲಿ 198 ವಾರ್ಡ್ ಇತ್ತು. ಹೊರಮಾವು ವಾರ್ಡ್ 25ರಲ್ಲಿ ಒಂದೂವರೆ ಲಕ್ಷ ಜನರಿದ್ದರು. ಇಷ್ಟು ಜನ ಒಂದೆಡೆ ಇದ್ದರೆ ಚುನಾವಣೆ ನಡೆಸುವುದು ಹೇಗೆ? ಹೀಗಾಗಿ ಡಿ-ಲಿಮಿಟೇಷನ್ ಮಾಡಲು ಮುಂದಾಗಿದೆ. ಸಿಎಂ ಜೊತೆ ಮಾತನಾಡಿದ್ದೇವೆ. ಚುನಾವಣೆಗೆ ಹೆದರುವ ಪಕ್ಷ ನಮ್ಮದಲ್ಲ. ನಾವೇ ಅಧಿಕಾರಕ್ಕೆ ಬಂದು ಮೇಯರ್ ಕೂಡ ಆಗುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜನರ ಋಣ ತೀರಿಸುವ ಕೆಲಸ ಮಾಡುತ್ತೇವೆ. ಯಾವುದೇ ಪ್ರದೇಶದಲ್ಲಿ ರಸ್ತೆ ಸಮಸ್ಯೆಗಳಿದ್ದರೆ ಅದನ್ನು ನನ್ನ ಗಮನಕ್ಕೆ ತನ್ನಿ ಎಂದು ಸಚಿವರು ಹೇಳಿದರು.
ಇದನ್ನೂ ಓದಿ:ಮೂವರು ಮೋದಿಗಳು ದೇಶವನ್ನು ಕೊಳ್ಳೆ ಹೊಡೆದಿದ್ದಾರೆ; ಇಬ್ಬರು ಓಡಿ ಹೋಗಿದ್ದಾರೆ!
ಬೆಂಗಳೂರಿನಲ್ಲಿ ಮೆಟ್ರೋ ಸ್ಟೇಷನ್ ಗೆ ಶಂಕರ್ ನಾಗ್ ಹೆಸರಿಡುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಶಂಕರ್ ನಾಗ್ ಕನ್ನಡ ಚಿತ್ರರಂಗಕ್ಕೆ ತಮ್ಮದೆ ಕೊಡುಗೆ ಕೊಟ್ಟಿದ್ದಾರೆ. ಖಂಡಿತವಾಗಿ ಈ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡುತ್ತೇವೆ. ಯಾವುದಾದರೂ ಒಂದು ಮೆಟ್ರೋ ನಿಲ್ದಾಣಕ್ಕೆ ಶಂಕರ್ ನಾಗ್ ಹೆಸರಿಡಲು ಮನವಿ ಮಾಡುತ್ತೇವೆ ಎಂದರು.