Advertisement
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಶನಿವಾರ ಶಿಡ್ಲಘಟ್ಟ ತಾಲೂಕಿನ ಬಶೆಟ್ಟಿಹಳ್ಳಿ ಹೋಬಳಿ ನಾಗರೆಡ್ಡಿಹಳ್ಳಿ ಬಳಿ ಪಶುಸಂಗೋಪನಾ ಇಲಾಖೆಯಿಂದ ನಿರ್ಮಿಸಲುದ್ದೇಶಿಸಿರುವ ಗೋಶಾಲೆ ಕಾಮಗಾರಿಗೆ ಚಾಲನೆ ನೀಡಿದ್ದಾರೆ.
Related Articles
Advertisement
10 ಎಕರೆ ಪ್ರದೇಶದಲ್ಲಿ ಸುಮಾರು 50 ಲಕ್ಷ ರೂ ವೆಚ್ಚದಲ್ಲಿ ಈ ಗೋಶಾಲೆ ನಿರ್ಮಾಣವಾಗಲಿದ್ದು, ವಯಸ್ಸಾದ, ರೋಗಗ್ರಸ್ಥ, ಅಂಗವಿಕಲ ಜಾನುವಾರುಗಳಿಗೆ ಪುನರ್ವಸತಿ ಕಲ್ಪಿಸಲಿದೆ. ಗೋಶಾಲೆಯ ಉಪ ಉತ್ಪನ್ನಗಳಿಂದ ತಯಾರಿಸಿದ ವಸ್ತುಗಳಿಗೆ ಖಾದಿ ಗ್ರಾಮೋದ್ಯೋಗ, ಕೆಎಂಎಫ್ ಮೂಲಕ ಮಾರುಕಟ್ಟೆ ಕಲ್ಪಿಸಿ, ಸುಸ್ಥಿರ ಸಂಪನ್ಮೂಲದ ವ್ಯವಸ್ಥೆ ಮಾಡಲಾಗುವುದು” ಎಂದು ಸಚಿವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಗೋಶಾಲೆಗಳ ನಿರ್ಮಾಣಕ್ಕಾಗಿ ಪ್ರತಿ ಜಿಲ್ಲೆಗೆ ಮೊದಲ ಹಾಗೂ ಎರಡನೇ ಕಂತು ಸೇರಿ 24 ಲಕ್ಷ ರೂ. ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಿದೆ. ಸರ್ಕಾರ ಅಥವಾ ಸಂಸ್ಥೆಗಳಿಂದ ನಡೆಸುವ ಗೋಶಾಲೆಯಲ್ಲಿ ಪ್ರತಿ ಜಾನುವಾರು ವೆಚ್ಚ ದಿನಕ್ಕೆ 17.30 ರೂ. ನಿಗದಿಪಡಿಸಲಾಗಿದೆ. ಜಿಲ್ಲೆಯ ಒಟ್ಟು ಜಾನುವಾರು ಪೈಕಿ ಶೇ.0.75 ರಷ್ಟು ಜಾನುವಾರುಗಳಿಗೆ ಸ್ಥಳಾವಕಾಶ ಲಭ್ಯವಿರುವುದನ್ನು ಖಚಿತಪಡಿಸಿಕೊಳ್ಳಬೇಕಾಗುತ್ತದೆ. 2018 ರ ಗಣತಿ ಪ್ರಕಾರ ಜಿಲ್ಲೆಯಲ್ಲಿ 2,13,815 ದನಗಳು ಹಾಗೂ 26,397 ಎಮ್ಮೆಗಳಿವೆ.
ಕಾರ್ಯಕ್ರಮದಲ್ಲಿ ಶಾಸಕ ವಿ.ಮುನಿಯಪ್ಪ,ಎಪಿಎಂಸಿ ಅಧ್ಯಕ್ಷ ನಾರಾಯಣಸ್ವಾಮಿ, ಮಾಜಿ ಶಾಸಕ ಎಂ.ರಾಜಣ್ಣ,ಜಿಲ್ಲಾಧಿಕಾರಿ ಆರ್.ಲತಾ,ಜಿಪಂ ಸಿಇಓ ಶಿವಶಂಕರ್,ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.