Advertisement

ಕೈಗಾರಿಕೆಗಳಲ್ಲಿ ಉತ್ಪಾದನೆ ಹೆಚ್ಚಳಕ್ಕೆ ಒತ್ತು : ಸಚಿವ

04:24 PM Feb 12, 2021 | Team Udayavani |

ಮೈಸೂರು: ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಸೂಕ್ಷ್ಮ ಸಣ್ಣ ಕೈಗಾರಿಕೆಗಳಿಗೆ ಇಲಾಖೆ ವತಿಯಿಂದ ಸ್ವಂತ್ವ ‌ಕಟ್ಟಡ ನಿರ್ಮಿಸಿ, ಉತ್ಪಾದನೆ ಹೆಚ್ಚಳಕ್ಕೆ ಅಗತ್ಯ ಒತ್ತು ನೀಡಲಾಗುವುದು ಎಂದು ಸಣ್ಣ ಕೈಗಾರಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಚಿವ ಸಿ.ಸಿ.ಪಾಟೀಲ್‌ ಹೇಳಿದರು.

Advertisement

ನಗರದ ಜಿಲ್ಲಾ ಕೈಗಾರಿಕೆ ಕೇಂದ್ರದಲ್ಲಿ ಗುರುವಾರ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಆಟೋ ಮೋಟಿವ್‌ ಎಕ್ಸೆಲ್‌, ಟಿವಿಎಸ್‌, ಎಲ್‌ ಅಂಡ್‌ ಟಿ, ಏಷ್ಯನ್‌ ಪೈಂಟ್ಸ್‌ ಸೇರಿ ಅನೇಕ ಕೈಗಾರಿಕಾ ಕೇಂದ್ರಗಳಿಗೆ ಸೂಕ್ಷ್ಮ ,ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳು ವಿವಿಧ ಸರಕನ್ನು ಸರಬರಾಜು ಮಾಡುತ್ತಿವೆ. ಆದರೆ, ಈ ಕೈಗಾರಿಕೆಗಳು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿವೆ. ಅವರಿಗೆ ಇಲಾಖೆ ವತಿ ಯಿಂದ ಸ್ವಂತ ಕಟ್ಟಡ ನಿರ್ಮಿಸಿ, ಉತ್ಪನ್ನಗಳನ್ನು ಮತ್ತಷ್ಟು ಹೆಚ್ಚಿಸುವಂತೆ ಮಾಡಲು ಚಿಂತಿಸಲಾಗುವುದು ಎಂದರು.

ನನ್ನ ಗಮನಕ್ಕೆ ತನ್ನಿ: ಜಿಲ್ಲೆಯಲ್ಲಿ ನೂತನ ಉದ್ಯಮಿ ಗಳನ್ನು ಪ್ರೋತ್ಸಾಹಿಸಲು ಅನೇಕ  ಕಾರ್ಯಕ್ರಮಗಳನ್ನು ಇಲಾಖೆಯಿಂದ ಹಮ್ಮಿಕೊಳ್ಳಲಾಗುವುದು. ಇದಕ್ಕೆ ಅಗತ್ಯವಿರುವ ಜಾಗ ಖರೀದಿ, ಇನ್ನಿತರ ವಿಚಾರಗಳ ಸಂಬಂಧ ಸಮಸ್ಯೆಗಳಿದ್ದರೆ ಅಧಿಕಾರಿಗಳು ಗಮನಕ್ಕೆ ತರುವಂತೆ ತಿಳಿಸಿದರು.

ಅಹತ್ಯ ಚರ್ಚೆ: ಆತ್ಮನಿರ್ಭರ ಭಾರತ ಯೋಜನೆಯಡಿ ಸಣ್ಣ ಕೈಗಾರಿಕೆಗಳ ಉತ್ತೇಜನಕ್ಕೆ ಕೇಂದ್ರ ಸರ್ಕಾರದಿಂದ ಅನುದಾನ ಪಡೆದುಕೊಳ್ಳಬಹುದು. ಈ ಬಗ್ಗೆ ದೆಹಲಿಗೆ ಭೇಟಿ ನೀಡಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದೆಂದರು.

ಇದನ್ನೂ ಓದಿ :ಕಸ ವಿಲೇವಾರಿಗೆ ವಾಟ್ಸ್‌ಆ್ಯಪ್‌ ತಂಡ!

Advertisement

ಜಿಲ್ಲೆಯಲ್ಲಿ ಸಣ್ಣ ಕೈಗಾರಿಕೋದ್ಯಮಕ್ಕೆ ಬಹಳಷ್ಟು ಅವಕಾಶವಿದ್ದು, ಈ ಬಗ್ಗೆ ಇಲಾಖೆ ಅಧಿಕಾರಿಗಳು ಕೈಗಾರಿಕೋದ್ಯಮಿಗಳಿಗೆ ಅನುಕೂಲವಾಗುವಂತೆ ಕೈಗಾರಿಕೆ ಪ್ರದೇಶಗಳನ್ನು ನಿರ್ಮಿಸಲು ಅಗತ್ಯ ‌ ಕ್ರಮ ಕೈಗೊಳ್ಳಬೇಕೆಂದರು. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಡಿ.ಕೆ.ಲಿಂಗರಾಜು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪ ನಿರ್ದೇಶಕ ವಿನೋದ್‌ ಚಂದ್ರ, ಸಹಾಯಕ ನಿರ್ದೇಶಕ ಆರ್‌.ರಾಜು, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಉಪನಿರ್ದೇಶಕಿ ಮೇಘನಾ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next