Advertisement

ಸಿದ್ದರಾಮಯ್ಯ ಹಿರಿಯ ಅಕ್ಕ ನಿಧನ; ಸಿಎಂ ಕಾರ್ಯಕ್ರಮಗಳು ರದ್ದು 

08:43 AM Oct 07, 2017 | |

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಿರಿಯ ಸಹೋದರಿ ಚಿಕ್ಕಮ್ಮ ಅವರು ಶುಕ್ರವಾರ ರಾತ್ರಿ ಮೈಸೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.ಅವರಿಗೆ 90 ವರ್ಷ ಪ್ರಾಯವಾಗಿತ್ತು. 

Advertisement

ವಯೋ ಸಹಜ ಆನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫ‌ಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. 

ಇಂದು ದೇವೇಗೌಡನ ಹುಂಡಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದ್ದು , ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಾ ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ರದ್ದು ಪಡಿಸಿ ತೆರಳಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next