ಮೈಸೂರು: ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡಿರುವ ಶಾಸಕ ಜಿ.ಟಿ. ದೇವೇಗೌಡರನ್ನು ಸೋಮವಾರ ನಗರದಲ್ಲಿ ಕೇಂದ್ರ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಭೇಟಿ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ.
ಭೇಟಿ ಬಳಿಕ ಮಾಧ್ಯಮಗಳ ಜತೆ ನಾತನಾಡಿದ ಸಿ.ಎಂ. ಇಬ್ರಾಹಿಂ, ಜೆಡಿಎಸ್‌ನಲ್ಲಿ ನೊಂದಿರುವ ಶಾಸಕರನ್ನು ಒಗ್ಗೂಡಿಸಲು ಯತ್ನಿಸುತ್ತಿದ್ದೇನೆ. ಹೊಸ ಪಕ್ಷವೋ, ತೃತೀಯ ರಂಗವೋ ಅಥವಾ ಜೆಡಿಎಸ್ ಬಲವರ್ಧನೆಯೋ ಎಲ್ಲವನ್ನೂ ಮುಂದಿನ ದಿನಗಳಲ್ಲಿ ಪರಿಸ್ಥಿತಿ ಆಧರಿಸಿ ತೀರ್ಮಾನ ಮಾಡುತ್ತೇವೆ ಎಂದರು.
ಈಗಲೂ ನಾನೇ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ. ಈಗಲೂ ಎಚ್.ಡಿ. ದೇವೇಗೌಡರು ಬಿಜೆಪಿ ಸಹವಾಸ ಬಿಟ್ಟು ಬರಲಿ, ಪಕ್ಷವನ್ನು ಕಟ್ಟುತ್ತೇವೆ ಎಂದರು.
ಇಬ್ರಾಹಿಂ ಭೇಟಿ ಬಗ್ಗೆ ಜಿ.ಟಿ. ದೇವೇಗೌಡ ಪ್ರತಿಕಿಯಿಸಿ, ಪ್ರತ್ಯೇಕ ಪ್ರಾದೇಶಿಕ ಪಕ್ಷ ಕಟ್ಟುವ ಉತ್ಸಾಹ ಇಬ್ರಾಹಿಂ ಅವರಿಗಿದ್ದು, ನನ್ನ ಬಳಿ ಹೇಳಿಕೊಂಡಿದ್ದಾ ರೆ. ನಾನು ಅವರು ಹೇಳಿದ್ದನ್ನು ಕೇಳಿಸಿಕೊಂಡಿದ್ದೇನೆ ಅಷ್ಟೆ ಎಂದರು.